ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಸಂಖ್ಯೆ 49ಕ್ಕೆ ಇಳಿಕೆ

Last Updated 8 ಅಕ್ಟೋಬರ್ 2021, 13:58 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 4 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 49ಕ್ಕೆ ಇಳಿಕೆಯಾಗಿದೆ.

ಮಾಲೂರು ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ ಇಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 9 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಮಾಲೂರು ತಾಲ್ಲೂಕಿನ ಇಬ್ಬರು, ಕೆಜಿಎಫ್‌ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರು, ಮುಳಬಾಗಿಲು ತಾಲ್ಲೂಕಿನ 5 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT