ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆ

Last Updated 13 ಫೆಬ್ರುವರಿ 2021, 14:38 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 7 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಶನಿವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.

ಕೆಜಿಎಫ್‌ ತಾಲ್ಲೂಕಿನ 3 ಮಂದಿಗೆ ಹಾಗೂ ಕೋಲಾರ, ಮಾಲೂರು, ಬಂಗಾರಪೇಟೆ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 4 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ಮತ್ತು ಬಂಗಾರಪೇಟೆ ತಾಲ್ಲೂಕಿನ ತಲಾ ಒಬ್ಬರು, ಕೆಜಿಎಫ್‌ ತಾಲ್ಲೂಕಿನ ಇಬ್ಬರನ್ನು ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT