ಕೋಲಾರ ತಾಲ್ಲೂಕಿನ 6 ಮಂದಿಗೆ, ಮಾಲೂರು, ಕೆಜಿಎಫ್ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 3 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನ ಇಬ್ಬರಿಗೆ, ಬಂಗಾರಪೇಟೆ ತಾಲ್ಲೂಕಿನ ಒಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.