ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 3 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಶುಕ್ರವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ಕೋಲಾರ ತಾಲ್ಲೂಕಿನ ಮೂವರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 3 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ ಇಬ್ಬರು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ಒಬ್ಬರನ್ನು ಮನೆಗೆ ಕಳುಹಿಸಲಾಯಿತು.