ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಸಂಖ್ಯೆ 22ಕ್ಕೆ ಏರಿಕೆ

Last Updated 11 ಫೆಬ್ರುವರಿ 2021, 13:50 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 6 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಗುರುವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ಕೋಲಾರ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಇಬ್ಬರಿಗೆ, ಮಾಲೂರು ಹಾಗೂ ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 7 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ಮತ್ತು ಮಾಲೂರು ತಾಲ್ಲೂಕಿನ ತಲಾ 3 ಮಂದಿ, ಶ್ರೀನಿವಾಸಪುರ ತಾಲ್ಲೂಕಿನ ಒಬ್ಬರನ್ನು ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT