ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 48 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 13 ಮಂದಿ, ಮಾಲೂರು ತಾಲ್ಲೂಕಿನ 25, ಕೆಜಿಎಫ್ ತಾಲ್ಲೂಕಿನ 6, ಬಂಗಾರಪೇಟೆ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಇಬ್ಬರನ್ನು ಮನೆಗೆ ಕಳುಹಿಸಲಾಯಿತು.