ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 55 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 5 ಮಂದಿ, ಮಾಲೂರು ತಾಲ್ಲೂಕಿನ ಇಬ್ಬರು, ಬಂಗಾರಪೇಟೆ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 3 ಮಂದಿ, ಕೆಜಿಎಫ್ ತಾಲ್ಲೂಕಿನ 41 ಮಂದಿ, ಶ್ರೀನಿವಾಸಪುರ ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.