ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 13 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 7 ಮಂದಿ, ಬಂಗಾರಪೇಟೆ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಇಬ್ಬರು, ಕೆಜಿಎಫ್ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.