ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 3 ಮಂದಿ, ಮಾಲೂರು, ಬಂಗಾರಪೇಟೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರು, ಕೆಜಿಎಫ್ ತಾಲ್ಲೂಕಿನ 4, ಮುಳಬಾಗಿಲು ತಾಲ್ಲೂಕಿನ ಇಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.