ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 20 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 8 ಮಂದಿ, ಮಾಲೂರು ತಾಲ್ಲೂಕಿನ ಒಬ್ಬರು, ಕೆಜಿಎಫ್ ತಾಲ್ಲೂಕಿನ 5, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 3 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.