ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 19 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 10, ಮಾಲೂರು ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 3 ಮಂದಿ, ಬಂಗಾರಪೇಟೆ ತಾಲ್ಲೂಕಿನ ಇಬ್ಬರು, ಶ್ರೀನಿವಾಸಪುರ ತಾಲ್ಲೂಕಿನ ಒಬ್ಬರನ್ನು ಮನೆಗೆ ಕಳುಹಿಸಲಾಯಿತು.