ಶ್ರೀನಿವಾಸಪುರ: ಬಿಜೆಪಿ ಕಾರ್ಯಕರ್ತರು ಪಕ್ಷದ ಸಂಘಟನೆಗೆ ಸಾಂಘಿಕ ಪ್ರಯತ್ನ ನಡೆಸಬೇಕು. ಪಕ್ಷದ ಸಿದ್ಧಾಂತಕ್ಕೆ ಕಟ್ಟುಬಿದ್ದು ಕಾರ್ಯನಿರ್ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ವೈ.ಎ.ನಾರಾಯಣಸ್ವಾಮಿ ಹೇಳಿದರು.

ಪಟ್ಟಣದ ಹೊರವಲಯದ ವಿಐಪಿಎಸ್ ಸಭಾಂಗಣದಲ್ಲಿ ಗುರುವಾರ ನಡೆದ ತಾಲ್ಲೂಕು ಬಿಜೆಪಿ ಮುಖಂಡರ ಸಭೆಯಲ್ಲಿ ಮಾತನಾಡಿದರು.

ಕಾರ್ಯಕರ್ತರು ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಮತದಾರರ ಗಮನಕಕ್ಕೆ ತರಬೇಕು ಎಂದು ಹೇಳಿದರು.

ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಿದಾನಂದ ಎಂ. ಗೌಡ ಮಾತನಾಡಿ, ಬಿಜೆಪಿಗೆ ಸಂಬಂಧಿಸಿದಂತೆ ಯಾವುದೇ ಬಂಡಾಯ ಇಲ್ಲ. ಕೆಲವರು ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಎಂದರು.

ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಮಾತನಾಡಿ, ‘ಪ್ರಧಾನಿ ಮೋದಿ ಅವರ ಸಮರ್ಥ ನಾಯಕತ್ವ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಾಧನೆಯಿಂದ ಜನರು ಪ್ರಭಾವಿತರಾಗಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ’ ಎಂದರು.

ಮುಖಂಡರಾದ ಜಯರಾಮರೆಡ್ಡಿ, ಅಶೋಕರೆಡ್ಡಿ, ಕೆ.ವಿ.ನಾಗರಾಜ್, ರೆಡ್ಡಪ್ಪ, ಬಂಗವಾದಿ ನಾಗರಾಜ್, ಕೊಟ್ರಗುಳಿ ನಾರಾಯಣಸ್ವಾಮಿ, ಶಿವಶಂಕರೇಗೌಡ, ನಾರಾಯಣಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.