ಕೋಲಾರ: ಜಿಲ್ಲೆಯ ಮಾಲೂರು ತಾಲ್ಲೂಕಿನ ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಬೀಪುರ ಗ್ರಾಮಸ್ಥರು ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ಮಂಗಳವಾರ ಚುನಾವಣೆ ಬಹಿಷ್ಕರಿಸಿದರು.

ಕಂಬೀಪುರ ಗ್ರಾಮದ ಒಂದು ಸದಸ್ಯ ಸ್ಥಾನಕ್ಕೆ 3 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಗ್ರಾಮದಲ್ಲಿ ಸುಮಾರು 380 ಮತದಾರರಿದ್ದಾರೆ. ಮಾಲೂರು–ಭಾವನಹಳ್ಳಿ ಮುಖ್ಯರಸ್ತೆಯಿಂದ ಗ್ರಾಮಕ್ಕೆ 3 ಕಿ.ಮೀ ಸಂಪರ್ಕ ರಸ್ತೆ ನಿರ್ಮಿಸಿ ಕೊಡಬೇಕೆಂದು ಆಗ್ರಹಿಸಿದ ಗ್ರಾಮಸ್ಥರು ಮತಗಟ್ಟೆಯತ್ತ ಸುಳಿಯಲಿಲ್ಲ.

ಜಿಲ್ಲಾ ಪಂಚಾಯಿತಿ ಸಿಇಒ ನಾಗರಾಜ್, ಉಪ ವಿಭಾಗಾಧಿಕಾರಿ ಸೋಮಶೇಖರ್ ಹಾಗೂ ತಹಶೀಲ್ದಾರ್ ಮಂಜುನಾಥ್ ಗ್ರಾಮಕ್ಕೆ ಭೇಟಿ ಕೊಟ್ಟು ಗ್ರಾಮಸ್ಥರ ಮನವೊಲಿಸುವ ಪ್ರಯತ್ನ ಮಾಡಿದರು. ಆದರೆ, ಜಿಲ್ಲಾಧಿಕಾರಿಯೇ ಗ್ರಾಮಕ್ಕೆ ಬಂದು ರಸ್ತೆ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಬೇಕೆಂದು ಪಟ್ಟು ಹಿಡಿದ ಗ್ರಾಮಸ್ಥರು ಮತದಾನದಿಂದ ದೂರ ಉಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.