ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಕಳವು

Last Updated 11 ಜೂನ್ 2020, 16:29 IST
ಅಕ್ಷರ ಗಾತ್ರ

ಕೋಲಾರ: ಇಲ್ಲಿನ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಬುಧವಾರ ರಾತ್ರಿ ಕಳ್ಳತನ ನಡೆದಿದ್ದು, ಕಳ್ಳರು ಜಮೀನುಗಳು ದಾಖಲೆಪತ್ರ ಕದ್ದು ಪರಾರಿಯಾಗಿದ್ದಾರೆ.

ಕಚೇರಿಯ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ಅಲ್ಮೇರಾದಲ್ಲಿದ್ದ ಜಮೀನುಗಳ ದಾಖಲೆಪತ್ರ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಕಳ್ಳರು ಜಮೀನಿನ ದಾಖಲೆಪತ್ರ ತಿರುಚಲು ಉಪ ನೋಂದಣಾಧಿಕಾರಿ ಕಚೇರಿಗೆ ನುಗ್ಗಿದ್ದಾರೆ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಲಾರ ತಾಲ್ಲೂಕಿನ ಕುಂಬಾರಹಳ್ಳಿಯಲ್ಲಿನ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿನ ನಕಲಿ ದಾಖಲೆಪತ್ರ ಸೃಷ್ಟಿಸಿ ಕಬಳಿಸುವ ಯತ್ನ ಫೆಬ್ರುವರಿಯಲ್ಲಿ ನಡೆದಿತ್ತು. ಈ ಪ್ರಕರಣದಲ್ಲಿ ಕಚೇರಿ ಸಿಬ್ಬಂದಿ ಹಾಗೂ ದಲ್ಲಾಳಿಗಳು ಭಾಗಿಯಾಗಿರುವುದು ಪೊಲೀಸ್‌ ತನಿಖೆಯಿಂದ ಗೊತ್ತಾಗಿತ್ತು. ಈ ಜಮೀನು ಹಾಗೂ ಕೆಲ ಪ್ರಭಾವಿಗಳ ಜಮೀನಿನ ದಾಖಲೆಪತ್ರ ತಿರುಚುವ ಉದ್ದೇಶಕ್ಕೆ ಕಳ್ಳರು ಕಚೇರಿಗೆ ನುಗ್ಗಿರುವ ಅನುಮಾನವಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಕಳ್ಳರಿಗೆ ಕಚೇರಿ ಸಿಬ್ಬಂದಿ ನೆರವು ನೀಡಿದ್ದಾರೆ. ಕಚೇರಿಯಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಇರುವ ಸಿ.ಸಿ ಕ್ಯಾಮೆರಾಗಳಲ್ಲಿ ದಾಖಲಾಗಿರುವ ದೃಶ್ಯಾವಳಿ ತುಣುಕು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT