ಶುಕ್ರವಾರ, ಜುಲೈ 1, 2022
27 °C

ಬಿಜೆಪಿಯಲ್ಲಿ ಬಣ ರಾಜಕೀಯ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ಮೂರು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯನಾಗಿದ್ದೇನೆ. ನಾನು ಬಿಜೆಪಿಗೆ ಸೇರಿದ ನಂತರ ಪಕ್ಷದಲ್ಲಿ ಬಣ ರಾಜಕೀಯ ಸೃಷ್ಟಿಯಾಗಿಲ್ಲ. ಆರಂಭದಲ್ಲಿ ಮಾಲೂರು ಕ್ಷೇತ್ರದ ಟಿಕೆಟ್‌ ಅಕಾಂಕ್ಷಿಗಳಿಗೆ ಅಸಮಾಧಾನವಿತ್ತು. ಈಗ ಅಸಮಾಧಾನ ಶಮನಗೊಂಡಿದ್ದು, ಪಕ್ಷ ಸಂಘಟನೆ ಗಟ್ಟಿಗೊಳ್ಳುತ್ತಿದೆ’ ಎಂದು ಮಾಜಿ ಶಾಸಕ ಕೆ.ಎಸ್‌.ಮಂಜುನಾಥ್‌ಗೌಡ ಹೇಳಿದರು.

ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಇತ್ತೀಚೆಗೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಪರ ಕೆಲಸ ಮಾಡಿದ್ದೆ. ಕೇವಲ 400 ಮತ ಇದ್ದ ಬಿಜೆಪಿಗೆ 1,900ಕ್ಕೂ ಹೆಚ್ಚು ಮತ ಕೊಡಿಸುವ ಪ್ರಯತ್ನ ಮಾಡಿದ್ದೇವೆ. ಇದಕ್ಕೆ ನಮಗೆ ತಕ್ಕ ಪ್ರತಿಫಲ ಸಿಗುತ್ತದೆ ಎಂಬ ನಂಬಿಕೆಯಿದೆ’ ಎಂದು ತಿಳಿಸಿದರು.

‘ಮಾಲೂರು ಪುರಸಭೆ ಚುನಾವಣೆಯಲ್ಲಿ 8 ಸ್ಥಾನ ಗೆಲ್ಲಿಸಿಕೊಂಡಿದ್ದೆವು. ಈಗ ಕ್ಷೇತ್ರದ ಯಾವುದೇ ಹಳ್ಳಿಗೆ ಹೋದರೂ ಹಬ್ಬದ ವಾತಾವರಣ ಸೃಷ್ಟಿಯಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಸುಧಾಕರ್ ಮತ್ತು ಮುನಿರತ್ನ ಅವರು ನನ್ನನ್ನು ಬಿಜೆಪಿಗೆ ಆಹ್ವಾನಿಸಿದರು. ಕಾರ್ಯಕರ್ತರೊಂದಿಗೆ ಚರ್ಚಿಸಿ ಬಿಜೆಪಿ ಸೇರಿದೆ. ಕ್ಷೇತ್ರದಲ್ಲಿ ಸಕ್ರಿಯವಾಗಿ ಪಕ್ಷ ಸಂಘಟಿಸಿ ಚುನಾವಣಾ ಗೆಲುವಿಗೆ ಪೂರಕ ವಾತಾವರಣ ಸೃಷ್ಟಿ ಮಾಡಿಕೊಳ್ಳುತ್ತೇನೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.