ಮಂಗಳವಾರ, ಮೇ 24, 2022
27 °C

ತೃತೀಯ ಭಾಷಾ ಪರೀಕ್ಷೆ: 483 ಮಂದಿ ಗೈರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಜಿಲ್ಲೆಯಾದ್ಯಂತ ಶುಕ್ರವಾರ 84 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗಳಾದ ಹಿಂದಿ, ಕನ್ನಡ ಮತ್ತು ಇಂಗ್ಲೀಷ್ ಪರೀಕ್ಷೆಯು ಯಾವುದೇ ಗೊಂದಲವಿಲ್ಲದೆ ಸುಸೂತ್ರವಾಗಿ ನಡೆದಿದ್ದು, 483 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾದರು.

ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 20,920 ವಿದ್ಯಾರ್ಥಿಗಳಲ್ಲಿ 20,437 ಮಂದಿ ಪರೀಕ್ಷೆ ಬರೆದರು. 19,910 ಮಂದಿ ಹೊಸ ಶಾಲಾ ಅಭ್ಯರ್ಥಿಗಳು ಹಾಗೂ ಖಾಸಗಿ, ಪುನರಾವರ್ತಿತ ಅಭ್ಯರ್ಥಿಗಳು ಸೇರಿದಂತೆ 1,010 ಮಂದಿ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದರು. ಅಂತಿಮವಾಗಿ ಇವರಲ್ಲಿ 313 ಮಂದಿ ಹೊಸ ಅಭ್ಯರ್ಥಿಗಳು ಹಾಗೂ 170 ಮಂದಿ ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ಗೈರಾದರು.

ಬಂಗಾರಪೇಟೆ ತಾಲ್ಲೂಕಿನ 13 ಕೇಂದ್ರಗಳಲ್ಲಿ ಪರೀಕ್ಷೆಗೆ 3,399 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದರು. ಇವರಲ್ಲಿ 80 ಮಂದಿ ಪರೀಕ್ಷೆಗೆ ಗೈರಾಗಿದ್ದಾರೆ. ಕೆಜಿಎಫ್ ತಾಲ್ಲೂಕಿನಲ್ಲಿ ಹೆಸರು ನೋಂದಾಯಿಸಿದ್ದ 2,595 ವಿದ್ಯಾರ್ಥಿಗಳಲ್ಲಿ 80 ಮಂದಿ ಪರೀಕ್ಷೆಗೆ ಬರಲಿಲ್ಲ.

ಕೋಲಾರ ತಾಲ್ಲೂಕಿನಲ್ಲಿ 5,984 ಮಂದಿ ಪರೀಕ್ಷೆಗೆ ನೋಂದಾಯಿಸಿದ್ದು, ಈ ಪೈಕಿ 196 ಮಂದಿ ಗೈರಾದರು. ಮಾಲೂರು ತಾಲ್ಲೂಕಿನಲ್ಲಿ ಹೆಸರು ನೋಂದಾಯಿಸಿದ್ದ 3,114 ವಿದ್ಯಾರ್ಥಿಗಳಲ್ಲಿ 67 ಮಂದಿ ಪರೀಕ್ಷೆ ಬರೆಯಲಿಲ್ಲ. ಮುಳಬಾಗಿಲು ತಾಲ್ಲೂಕಿನಲ್ಲಿ ಪರೀಕ್ಷೆಗೆ 3,053 ಮಂದಿ ಹೆಸರು ನೋಂದಾಯಿಸಿದ್ದು, ಇವರಲ್ಲಿ 44 ಮಂದಿ ಗೈರಾದರು. ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಹೆಸರು ನೋಂದಾಯಿಸಿದ್ದ 2,775 ಮಂದಿ ವಿದ್ಯಾರ್ಥಿಗಳಲ್ಲಿ 16 ಮಂದಿ ಪರೀಕ್ಷೆಗೆ ಬರಲಿಲ್ಲ.

 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.