ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕನಿಗೆ ಥಳಿತ: ಮೂವರ ಬಂಧನ

ತಲೆಮರೆಸಿಕೊಂಡಿರುವ ಏಳು ಆರೋಪಿಗಳಿಗಾಗಿ ಶೋಧ: ಆಸ್ಪತ್ರೆಗೆ ಜಿಲ್ಲಾಧಿಕಾರಿ, ಎಸ್‌ಪಿ ಭೇಟಿ, ಪರಿಹಾರ ವಿತರಣೆ
Last Updated 1 ಅಕ್ಟೋಬರ್ 2022, 19:20 IST
ಅಕ್ಷರ ಗಾತ್ರ

ಚಿಂತಾಮಣಿ:ಕಳ್ಳತನ ಆರೋಪದ ಮೇಲೆಪರಿಶಿಷ್ಟ ಜಾತಿಯ ಬಾಲಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಆರೋಪದ ಮೇಲೆ ಮೂವರು ಗ್ರಾಮಸ್ಥರನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಎರಡು ಪ್ರಕರಣ ದಾಖಲಾಗಿವೆ. ಹತ್ತು ಗ್ರಾಮಸ್ಥರ ವಿರುದ್ಧ ದೌರ್ಜನ್ಯ ಮೊಕದ್ದಮೆ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಏಳು ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಸಂತ್ರಸ್ತ ಕುಟುಂಬಕ್ಕೆ ಪೊಲೀಸ್ ರಕ್ಷಣೆ ನೀಡಲಾಗಿದೆ.

ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿರುವಪರಿಶಿಷ್ಟ ಜಾತಿಯ ಬಾಲಕ ಮತ್ತು ಆತನ ಪೋಷಕರನ್ನು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಶನಿವಾರ ಭೇಟಿ ಮಾಡಿ ಧೈರ್ಯ ತುಂಬಿದರು.ಸಂತ್ರಸ್ತ ಕುಟುಂಬಕ್ಕೆ ಎಲ್ಲ ರೀತಿಯ ಕಾನೂನಾತ್ಮಕ ನೆರವು ಹಾಗೂ ರಕ್ಷಣೆ ನೀಡಲಾಗುವುದು ಎಂದರು.

ಜಿಲ್ಲಾಡಳಿತದಿಂದ ಪ್ರಥಮ ಹಂತದ ಪರಿಹಾರವಾಗಿ ತಲಾ ₹25 ಸಾವಿರದ ಚೆಕ್ ನೀಡಲಾಯಿತು.ಬಾಲಕ ಮತ್ತು ಪೋಷಕರಿಂದ ಅಧಿಕಾರಿಗಳು ಘಟನೆಯ ಬಗ್ಗೆ ಮಾಹಿತಿ ಪಡೆದರು. ‘ಚಿಂತಾಮಣಿಯ ಎಎಸ್‌ಪಿ ಕುಶಾಲ್ ಚೌಕ್ಸೆ ತನಿಖಾಧಿಕಾರಿಯಾಗಿದ್ದು, ಉಳಿದ ಆರೋಪಿಗಳನ್ನು ಶೀಘ್ರ ಬಂಧಿಸ ಲಾಗುವುದು. ಕುಟುಂಬಕ್ಕೆ ತೊಂದರೆಯಾಗದಂತೆ ರಕ್ಷಣೆ ನೀಡಲಾಗಿದೆ’ ಎಂದು ಎಸ್ಪಿ ಡಿ.ಎಲ್ ನಾಗೇಶ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT