ಶುಕ್ರವಾರ, ಜುಲೈ 30, 2021
28 °C

ಎಂಟಿಬಿಗೆ ಟಿಕೆಟ್‌: ಒತ್ತಡ ತರುತ್ತೇವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ಎಂಟಿಬಿ ನಾಗರಾಜ್ ಕಾಂಗ್ರೆಸ್‌ ದುರಾಡಳಿತದಿಂದ ಬೇಸತ್ತು ಬಿಜೆಪಿಗೆ ಬಂದಿದ್ದು, ಅವರಿಗೆ ವಿಧಾನ ಪರಿಷತ್‌ ಚುನಾವಣೆಯಲ್ಲಿ ಟಿಕೆಟ್ ನೀಡಿ ಪಕ್ಷದಲ್ಲಿ ಉಳಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಮೇಲೆ ಒತ್ತಡ ತರುತ್ತೇವೆ’ ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು.

ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್‌– ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಎಂಟಿಬಿ ನಾಗರಾಜ್‌ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದಿದ್ದಾರೆ. ನಮ್ಮ ಒಲವು ಅವರ ಕಡೆಗಿದೆ. ಪಕ್ಷದ ಮೂಲ ಕಾರ್ಯಕರ್ತರ ಮನವೊಲಿಸಿ ಅವರಿಗೂ ಸೂಕ್ತ ಸ್ಥಾನಮಾನ ಕಲ್ಪಿಸಲಾಗುವುದು’ ಎಂದು ತಿಳಿಸಿದರು.

‘ಉಮೇಶ್ ಕತ್ತಿ ಹಾಗೂ ಪಕ್ಷದ ಕೆಲ ಶಾಸಕರು ರೊಟ್ಟಿ ಊಟ ಮಾಡುವುದಕ್ಕೆ ಇತ್ತೀಚೆಗೆ ಒಂದೆಡೆ ಸೇರಿದ್ದರು. ನಮ್ಮ ಪಕ್ಷದವರು ರೊಟ್ಟಿ ಊಟಕ್ಕೆ, ಮಾಂಸಾಹಾರ ತಿನ್ನೋದಕ್ಕೆ, ಪಕ್ಷ ಸಂಘಟನೆಗೆ ಒಂದೆಡೆ ಸೇರುತ್ತಿರುತ್ತಾರೆ. ಪಕ್ಷದಲ್ಲಿ ಇದು ಸಾಮಾನ್ಯ. ಸರ್ಕಾರದಲ್ಲಿ ಹಾಗೂ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ’ ಎಂದು ಸ್ಪಷ್ಟಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.