ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಡಾನೆ ದಾಳಿ; ರೈತ ಸಾವು

Published 14 ಏಪ್ರಿಲ್ 2024, 7:15 IST
Last Updated 14 ಏಪ್ರಿಲ್ 2024, 7:15 IST
ಅಕ್ಷರ ಗಾತ್ರ

ಬಂಗಾರಪೇಟೆ: ತಾಲ್ಲೂಕಿನ ಕಾಮಸಮುದ್ರ ಹೋಬಳಿಯ ಪೋಲೇನಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಮೃತಪಟ್ಟಿದ್ದಾರೆ.

ಗ್ರಾಮದ ನಾರಾಯಣಸ್ವಾಮಿ (45) ಮೃತ ರೈತ. ಬೆಳಿಗ್ಗೆ ತರಕಾರಿ ತರಲು ಬಂಗಾರಪೇಟೆ ಪಟ್ಟಣಕ್ಕೆ ಹೋಗುವಾಗ ಕಾಡಾನೆ ದಾಳಿ ನಡೆಸಿದೆ.

ಈ ಭಾಗದಲ್ಲಿ ವಾರದ ಅವಧಿಯಲ್ಲಿ ಕಾಡಾನೆ ದಾಳಿಯಿಂದ ಸಂಭವಿಸಿದ ಎರಡನೇ ಸಾವು ಇದಾಗಿದೆ. ವಾರದ ಹಿಂದೆ ತಮಿಳುನಾಡು ಮೂಲದ ಚಿಕ್ಕಬೀರಪ್ಪ ಎಂಬುವರು ಆನೆ ದಾಳಿಯಿಂದ ಮೃತರಾಗಿದ್ದರು.

ಇದು ತಮಿಳುನಾಡು ಗಡಿ ಗ್ರಾಮದ ಜನರಲ್ಲಿ ಆತಂಕ ಉಂಟು ಮಾಡಿದೆ. ಕಾಡಾನೆ ಹಾವಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿದ್ದಾರೆ. ಸ್ಥಳದಲ್ಲಿ ಸಾವಿರಾರು ಜನ ಜಮಾಯಿಸಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT