ಬುಧವಾರ, ಮೇ 18, 2022
29 °C

ಬಂಗಾರಪೇಟೆ: ಇಂದು ಹಂಚಾಳ ಗೇಟ್ ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಂಗಾರಪೇಟೆ: ದಿಲ್ಲಿಯಲ್ಲಿ ಹೋರಾಟನಿರತ ರೈತರ ಮೇಲೆ ಕೇಂದ್ರ ಸರ್ಕಾರ ನಡೆಸುತ್ತಿರುವ ದೌರ್ಜನ್ಯ ಖಂಡಿಸಿ ಹಾಗೂ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಫೆ. 6ರಂದು ಹಂಚಾಳ ಗೇಟ್ ಬಂದ್ ಮಾಡಲು ಸಂಘದ ಸಭೆಯಲ್ಲಿ ನಿರ್ಣಯಿಸಲಾಯಿತು ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್ ತಿಳಿಸಿದರು.

ಕೃಷಿ ಕಾಯ್ದೆಗಳ ವಿರುದ್ಧ ಸತತವಾಗಿ ಎರಡು ತಿಂಗಳಿಂದ ದಿಲ್ಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಯುತ್ತಿದೆ. ಕೇಂದ್ರ ಸರ್ಕಾರ ನೆಪಮಾತ್ರಕ್ಕೆ ರೈತರ ಜೊತೆ ಮಾತುಕತೆ ನಡೆಸಿರುವುದು ಖಂಡನೀಯ ಎಂದು ದೂರಿದರು.

ತಾಲ್ಲೂಕು ಅಧ್ಯಕ್ಷ ಮುನ್ನ ಮಾತನಾಡಿದರು. ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ, ಹಸಿರು ಸೇನೆಯ ಜಿಲ್ಲಾ ಅಧ್ಯಕ್ಷ ಕಿರಣ್, ತಾಲ್ಲೂಕು ಅಧ್ಯಕ್ಷ ಚಾಂದ್‌ಪಾಷಾ, ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಚಲಪತಿ, ಮಹಮದ್ ಶೋಯಿಬ್, ಜಮೀರ್‌ ಪಾಷಾ, ಜಾವೀದ್, ಘೌಸ್, ವಟ್ರಕುಂಟೆ ಆಂಜಿನಪ್ಪ, ಬಾಬಾಜಾನ್, ಕೋಲಾರ ತಾಲ್ಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಮಾಲೂರು ತಾಲ್ಲೂಕು ಅಧ್ಯಕ್ಷ ಮಾಸ್ತಿ ವೆಂಕಟೇಶ್, ಮಹಮದ್ ಬುರಾನ್, ವಡಗೂರು ಮಂಜುನಾಥ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.