ಕೋಲಾರ: ಜಿಲ್ಲಾ ಪಂಚಾಯಿತಿಯ 5 ಸ್ಥಾಯಿ ಸಮಿತಿಗಳ ಚುನಾವಣೆ ಸೋಮವಾರ (ಜೂನ್ 15) ನಡೆಯಲಿದೆ ಎಂದು ಚುನಾವಣಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಥಾಯಿ ಸಮಿತಿಗಳಿಗೆ ಸದಸ್ಯರನ್ನು 3ನೇ ಅವಧಿಗೆ ಆಯ್ಕೆ ಮಾಡಲು ಜೂನ್ 10ಕ್ಕೆ ಚುನಾವಣಾ ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ, ಸದಸ್ಯರ ಕೋರಂ ಕೊರತೆ ಕಾರಣಕ್ಕೆ ಚುನಾವಣೆಯನ್ನು ಜೂನ್ 15ಕ್ಕೆ ಮುಂದೂಡಲಾಯಿತು ಎಂದು ಹೇಳಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಕಾಲಾವಕಾಶ ನೀಡಲಾಗಿದೆ. ಬಳಿಕ ಮಧ್ಯಾಹ್ನ 12.30ರಿಂದ 1 ಗಂಟೆವರೆಗೆ ನಾಮಪತ್ರ ಪರಿಶೀಲಿಸಲಾಗುತ್ತದೆ. ನಂತರ ಕ್ರಮಬದ್ಧವಾಗಿರುವ ನಾಮಪತ್ರ ಸಲ್ಲಿಸಿರುವ ಸದಸ್ಯರ ಹೆಸರನ್ನು ಸೂಚಕರ ಹೆಸರಿನೊಂದಿಗೆ ಓದಿ ತಿಳಿಸಲಾಗುವುದು ಮತ್ತು ಸದಸ್ಯರಿಂದ ಹಾಜರಾತಿ ಪಡೆಯಲಾಗುವುದು. ಉಮೇದುವಾರಿಕೆ ಹಿಂಪಡೆಯಲು ಮಧ್ಯಾಹ್ನ 2.30ರಿಂದ 3 ಗಂಟೆವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ವಿವರಿಸಿದ್ದಾರೆ.

ಸಾಮಾನ್ಯ ಸ್ಥಾಯಿ ಸಮಿತಿ, ಹಣಕಾಸು, ಲೆಕ್ಕಪರಿಶೋಧನೆ ಹಾಗೂ ಯೋಜನಾ ಸ್ಥಾಯಿ ಸಮಿತಿಗೆ ತಲಾ 4 ಸದಸ್ಯರು, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಗೆ ಹಾಗೂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಗೆ ತಲಾ 5 ಸದಸ್ಯರು ಚುನಾಯಿಸುವ ಸದಸ್ಯರ ಸಂಖ್ಯೆಗಿಂತ ಹೆಚ್ಚಿಗೆ ಉಮೇದುವಾರರಿದ್ದರೆ ಅಂತಹ ಸ್ಥಾಯಿ ಸಮಿತಿಗಳಿಗೆ ಮಧ್ಯಾಹ್ನ 3ರಿಂದ 4 ಗಂಟೆವರೆಗೆ ಚುನಾವಣೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸಂಜೆ 4ರಿಂದ 4.30ರವರೆಗೆ ಚುನಾವಣೆ ನಡೆಸಲಾಗುವುದು. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ 4.30ರಿಂದ 5 ಗಂಟೆವರೆಗೆ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸಂಜೆ 5ರಿಂದ 5.30ರವರೆಗೆ ಚುನಾವಣೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.