ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಇಂದು ಫೋನ್‌–ಇನ್‌ ಕಾರ್ಯಕ್ರಮ

Last Updated 13 ಮೇ 2020, 12:38 IST
ಅಕ್ಷರ ಗಾತ್ರ

ಕೋಲಾರ: ಲಾಕ್‌ಡೌನ್‌ ಕಾರಣಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿರುವುದರಿಂದ ಆತಂಕದಲ್ಲಿರುವ ವಿದ್ಯಾರ್ಥಿಗಳ ಸಮಸ್ಯೆ ಪರಿಹಾರಕ್ಕಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಜಿಲ್ಲಾ ಕೇಂದ್ರದ ಡಿಡಿಪಿಐ ಕಚೇರಿಯಲ್ಲಿ ಗುರುವಾರ (ಮೇ 14) ನೇರ ಫೋನ್‌–ಇನ್‌ ಕಾರ್ಯಕ್ರಮ ಹಮ್ಮಿಕೊಂಡಿದೆ.

ವಿದ್ಯಾರ್ಥಿಗಳಲ್ಲಿನ ಪರೀಕ್ಷಾ ಭಯ ದೂರ ಮಾಡಲು ಮೇ 14ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2ರವರೆಗೆ ಫೋನ್‌–ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದರ ಜತೆಗೆ ಆತ್ಮಸ್ಥೈರ್ಯ ತುಂಬಲಾಗುತ್ತದೆ. ಈ ಹಿಂದೆ ಏ.23, ಏ.30 ಮತ್ತು ಮೇ 7ರಂದು ನಡೆದ ಫೋನ್‌–ಇನ್ ಕಾರ್ಯಕ್ರಮಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಕರೆ ಮಾಡಿದ್ದರು. ವಿದ್ಯಾರ್ಥಿಗಳು ಮತ್ತೊಮ್ಮೆ ತಮ್ಮ ಸಮಸ್ಯೆಗಳ ಪರಿಹಾರಕ್ಕೆ ವೇದಿಕೆ ಕಲ್ಪಿಸುವಂತೆ ಕೋರಿದ್ದರಿಂದ ಪುನಃ ಫೋನ್‌–ಇನ್ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ವಿಜ್ಞಾನ ಪಠ್ಯದಲ್ಲಿನ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸಮಸ್ಯೆಗಳಿದ್ದರೆ ಪರಿಹರಿಸಿಕೊಳ್ಳಲು ಮಕ್ಕಳು ಕರೆ ಮಾಡಬಹುದು. ಜತೆಗೆ ಪ್ರಥಮ ಭಾಷೆ ಉರ್ದು, ಪ್ರಥಮ ಭಾಷೆ ಇಂಗ್ಲೀಷ್, ತೃತೀಯ ಭಾಷೆ ಕನ್ನಡ ವಿಷಯಗಳಿಗೆ ಸಂಬಂಧಿಸಿದ ಸಮಸ್ಯೆಗಳಿದ್ದರೂ ಕರೆ ಮಾಡಿ ಪರಿಹರಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದ್ದಾರೆ.

ಫೋನ್–ಇನ್ ಕಾರ್ಯಕ್ರಮದಲ್ಲಿ ಡಿಡಿಪಿಐ ಕೆ.ರತ್ನಯ್ಯ ಸೇರಿದಂತೆ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸುತ್ತಾರೆ. ವಿದ್ಯಾರ್ಥಿಗಳು ದೂರವಾಣಿ ಸಂಖ್ಯೆ 08152 -225241 ಅಥವಾ ಮೊಬೈಲ್‌ ಸಂಖ್ಯೆ 9448999345ಕ್ಕೆ ಕರೆ ಮಾಡಿ ಪ್ರಯೋಜನ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT