ಕೋಲಾರ: ಕೋವಿಡ್–19 ಕಾರಣಕ್ಕೆ ಲಾಕ್‌ಡೌನ್ ಜಾರಿಯಾದ ಸಂದರ್ಭದಲ್ಲಿ ಪಾತಾಳಕ್ಕೆ ಕುಸಿದಿದ್ದ ಟೊಮೆಟೊ ಬೆಲೆ ಗಗನಕ್ಕೇರಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿಸಿದೆ.

ಹೊರ ರಾಜ್ಯ ಹಾಗೂ ಜಿಲ್ಲೆಗಳಿಗೆ ಟೊಮೆಟೊ ರಫ್ತಿನ ಪ್ರಮಾಣ ಗಣನೀಯವಾಗಿ ಹೆಚ್ಚಿದ್ದು, ದಿನದಿಂದ ದಿನಕ್ಕೆ ಟೊಮೆಟೊ ದರ ಏರು ಗತಿಯಲ್ಲಿ ಸಾಗಿದೆ. ಬೆಲೆ ಹೆಚ್ಚಳದಿಂದ ತತ್ತರಿಸಿದ್ದು, ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಬೆಲೆ ಏರಿಕೆ ಬಿಸಿ ಹೆಚ್ಚಾಗಿ ತಟ್ಟಿದೆ.

ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಕೋಲಾರ ಜಿಲ್ಲೆಯಲ್ಲಿ ಅತಿ ಹೆಚ್ಚು ಟೊಮೆಟೊ ಬೆಳೆಯಲಾಗುತ್ತದೆ. ಸದ್ಯ ಜಿಲ್ಲೆಯ 16,328 ಹೆಕ್ಟೇರ್ ಭೂಪ್ರದೇಶದಲ್ಲಿ ಟೊಮೆಟೊ ಬೆಳೆ ಇದೆ. ಸಾಮಾನ್ಯವಾಗಿ ಜೂನ್ ತಿಂಗಳಿಂದ ಆಗಸ್ಟ್ ಅಂತ್ಯದವರೆಗೆ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಬರುತ್ತದೆ. ವಾರ್ಷಿಕ ಸರಾಸರಿ 9.30 ಲಕ್ಷ ಮೆಟ್ರಿಕ್ ಟನ್ ಟೊಮೆಟೊ ಉತ್ಪಾದನೆಯಾಗುತ್ತದೆ.

ಜಿಲ್ಲೆಯಿಂದ ರಾಜಸ್ಥಾನ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಗುಜರಾತ್, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ರಾಜ್ಯಕ್ಕೆ ಪ್ರತಿನಿತ್ಯ ಟೊಮೆಟೊ ಪೂರೈಕೆಯಾಗುತ್ತದೆ. ಅಲ್ಲದೇ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಹಾಗೂ ಚೀನಾ ದೇಶಕ್ಕೂ ಟೊಮೆಟೊ ರಫ್ತಾಗುತ್ತದೆ.

ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಲಾಕ್‌ಡೌನ್ ಕಾರಣಕ್ಕೆ ಸರಕು ಸಾಗಣೆ ವಾಹನಗಳ ಸೇವೆಯಲ್ಲಿ ವ್ಯತ್ಯಯವಾಗಿದ್ದರಿಂದ ಕಾರಣ ಜಿಲ್ಲೆಯಿಂದ ಹೊರ ರಾಜ್ಯಗಳಿಗೆ ಟೊಮೆಟೊ ರಫ್ತು ಸ್ಥಗಿತಗೊಂಡಿತ್ತು. ಮತ್ತೊಂದೆಡೆ ಹೊರ ರಾಜ್ಯಗಳ ವರ್ತಕರು ಕೋವಿಡ್ ಭೀತಿಯಿಂದಾಗಿ ಜಿಲ್ಲೆಯ ಮಾರುಕಟ್ಟೆಗಳತ್ತ ಮುಖ ಮಾಡಿರಲಿಲ್ಲ. ಹೀಗಾಗಿ ಸ್ಥಳೀಯ ಮಾರುಕಟ್ಟೆಯಲ್ಲಿ ಟೊಮೆಟೊ ಕೇಳುವವರಿರಲಿಲ್ಲ.

ಟೊಮೆಟೊ ಬೆಳೆಗೆ ಖರ್ಚು ಮಾಡಿದ ಹಣ ಸಹ ಸಿಗದೆ ಸಾಕಷ್ಟು ರೈತರು ಜಮೀನಿನಲ್ಲೇ ಬೆಳೆ ನಾಶಪಡಿಸಿದ್ದರು. ಬೆಲೆ ಕುಸಿತದಿಂದ ಕಂಗಾಲಾಗಿದ್ದ ರೈತರು ಮಾರುಕಟ್ಟೆಯಲ್ಲೇ ಕಸದ ರಾಶಿಗೆ ಟೊಮೆಟೊ ಸುರಿದು ಹೋಗುವುದು ಸಾಮಾನ್ಯವಾಗಿತ್ತು.

ಹೆಚ್ಚಿದ ಬೇಡಿಕೆ: ಹೊರ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿರುವ ಕಾರಣ ಟೊಮೆಟೊ ಬೆಳೆಗೆ ಹಾನಿಯಾಗಿದೆ. ಹೀಗಾಗಿ ಹೊರಗಡೆಯಿಂದ ಸ್ಥಳೀಯ ಮಾರುಕಟ್ಟೆಗೆ ಟೊಮೆಟೊ ಬರುತ್ತಿಲ್ಲ. ಮತ್ತೊಂದೆಡೆ ಹೊರ ರಾಜ್ಯ ಹಾಗೂ ಜಿಲ್ಲೆಗಳಲ್ಲಿ ಟೊಮೆಟೊಗೆ ಬೇಡಿಕೆ ಹೆಚ್ಚಿದ್ದು, ಅಲ್ಲಿನ ವರ್ತಕರು ಜಿಲ್ಲೆಯ ಮಾರುಕಟ್ಟೆಗಳಲ್ಲಿ ಟೊಮೆಟೊ ಖರೀದಿಸಿಕೊಂಡು ಹೋಗುತ್ತಿದ್ದಾರೆ. ಟೊಮೆಟೊಗೆ ಬೇಡಿಕೆ ಹೆಚ್ಚಿರುವುದರಿಂದ ಕಳೆದೊಂದು ತಿಂಗಳಿಂದ ಬೆಲೆಯು ಹೆಚ್ಚಳವಾಗಿದೆ.

ಐದು ಪಟ್ಟು ಹೆಚ್ಚು: ಮೇ ತಿಂಗಳಲ್ಲಿ ಸ್ಥಳೀಯ ಎಪಿಎಂಸಿಯಲ್ಲಿ ಟೊಮೆಟೊ ಸಗಟು ದರ ಕ್ವಿಂಟಾಲ್‌ಗೆ ಕನಿಷ್ಠ ₹ 300 ಮತ್ತು ಗರಿಷ್ಠ ₹ 767 ಇತ್ತು. ಸೋಮವಾರ (ಜುಲೈ 20) ಸಗಟು ದರ ಕ್ವಿಂಟಾಲ್‌ಗೆ ಕನಿಷ್ಠ ₹ 667 ಮತ್ತು ಗರಿಷ್ಠ ₹ 3,867ಕ್ಕೆ ತಲುಪಿದೆ. ಸೋಮವಾರ 10,283 ಕ್ವಿಂಟಾಲ್ ಟೊಮೆಟೊ ಮಾರುಕಟ್ಟೆಗೆ ಬಂದಿದೆ.

ಆವಕ ಹೆಚ್ಚಿದ್ದರೂ ಬೆಲೆ ಮಾತ್ರ ಇಳಿಕೆಯಾಗುತ್ತಿಲ್ಲ. ಬೇಡಿಕೆಗೆ ತಕ್ಕಂತೆ ಸಗಟು ಮತ್ತು ಚಿಲ್ಲರೆ ಮಾರಾಟ ದರ ದಿನದಿಂದ ದಿನಕ್ಕೆ ಏರುತ್ತಿದೆ. ಜೂನ್ ತಿಂಗಳಲ್ಲಿ ಟೊಮೆಟೊ ಚಿಲ್ಲರೆ ಮಾರಾಟ ದರ ಕೆ.ಜಿಗೆ ₹ 10 ಇತ್ತು. ಈಗ ದರ ₹ 50ರ ಗಡಿ ದಾಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.