ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾ.ಪಂ: ಆಡಳಿತಾಧಿಕಾರಿ ನೇಮಕ

Last Updated 4 ಮೇ 2021, 16:10 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ತಾಲ್ಲೂಕು ಪಂಚಾಯಿತಿಗಳ ಚುನಾಯಿತ ಸದಸ್ಯರ ಆಡಳಿತಾವಧಿ ಮೇ ತಿಂಗಳಲ್ಲಿ ಅಂತ್ಯಗೊಳ್ಳುವ ಹಿನ್ನೆಲೆಯಲ್ಲಿ ತಾ.ಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ಪ್ರಾದೇಶಿಕ ಆಯುಕ್ತ ನವೀನ್‌ ರಾಜ್‌ಸಿಂಗ್‌ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಕೋಲಾರ ತಾ.ಪಂ ಆಡಳಿತಾವಧಿ ಮೇ 19ರಂದು ಅಂತ್ಯಗೊಳ್ಳಲಿದ್ದು, ಹೆಚ್ಚುವರಿ ಜಿಲ್ಲಾಧಿಕಾರಿ ಸ್ನೇಹಾ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. ಅದೇ ರೀತಿ ಮಾಲೂರು ತಾ.ಪಂ ಅಧಿಕಾರಾವಧಿ ಮೇ 16ರಂದು ಮುಕ್ತಾಯವಾಗಲಿದ್ದು, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರೂಪಾದೇವಿ ಅವರನ್ನು ಆಡಳಿತಾಧಿಕಾರಿಯಾಗಿ ನಿಯೋಜಿಸಲಾಗಿದೆ.

ಬಂಗಾರಪೇಟೆ ತಾ.ಪಂ ಅಧಿಕಾರಾವಧಿ ಮೇ 17ಕ್ಕೆ ಕೊನೆಗೊಳ್ಳಲಿದ್ದು, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. ಮುಳಬಾಗಿಲು ತಾ.ಪಂ ಆಡಳಿತಾವಧಿ ಮೇ 4ಕ್ಕೆ ಅಂತ್ಯವಾಗಿದ್ದು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಂಜೀವಪ್ಪ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ.

ಕೆಜಿಎಫ್‌ ನೂತನ ತಾ.ಪಂಗೆ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿಯನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. ಶ್ರೀನಿವಾಸಪುರ ತಾ.ಪಂ ಆಡಳಿತಾವಧಿ ಮೇ 6ಕ್ಕೆ ಅಂತ್ಯವಾಗಲಿದ್ದು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕರನ್ನು ಆಡಳಿತಾಧಿಕಾರಿಯಾಗಿ ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT