ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಳಬಾಗಿಲು: 2,500 ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್

Published 14 ಆಗಸ್ಟ್ 2024, 14:25 IST
Last Updated 14 ಆಗಸ್ಟ್ 2024, 14:25 IST
ಅಕ್ಷರ ಗಾತ್ರ

ಮುಳಬಾಗಿಲು: ತಾಲ್ಲೂಕಿನ ಸರ್ಕಾರಿ ಕನ್ನಡ ಹಾಗೂ ಉರ್ದು ಶಾಲೆಗಳ 2,500 ವಿದ್ಯಾರ್ಥಿಗಳಿಗೆ ಬುಧವಾರ ಪ್ರಗತಿ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಉಚಿತವಾಗಿ ಟ್ರ್ಯಾಕ್ ಸೂಟುಗಳನ್ನು ವಿತರಿಸಲಾಯಿತು.

ನಗರದ ಡಿವಿಜಿ ಗಡಿ ಭವನದಲ್ಲಿ ಬುಧವಾರ ನಡೆದ ಬೃಹತ್ ಟ್ರ್ಯಾಕ್ ಸೂಟ್ ವಿತರಣಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಾಸಕ ಸಮೃದ್ಧಿ ಮಂಜುನಾಥ್, ‘ಮೂಲಸೌಕರ್ಯಗಳು ಇಲ್ಲದ ಕಾರಣ ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗಿ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪುತ್ತಿವೆ. ಇಂಥ ಸಮಯದಲ್ಲಿ ಪ್ರಗತಿ ಚಾರಿಟೆಬಲ್ ಟ್ರಸ್ಟ್ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯ ವಿತರಿಸುತ್ತಿದೆ’ ಎಂದರು.

ವಿದ್ಯಾರ್ಥಿಗಳು ಟ್ರಸ್ಟ್ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಉತ್ತಮ ವಿದ್ಯಾಭ್ಯಾಸ ಪಡೆಯಬೇಕು. ಸಮಾಜದಲ್ಲಿ ಅತ್ಯುನ್ನತ ಮಟ್ಟಕ್ಕೆ ಬೆಳೆಯಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಹಾಗೂ ಮೌಲ್ಯಯುತ ಶಿಕ್ಷಣ ನೀಡಬೇಕು ಎಂದು ಹೇಳಿದರು. 

ಟ್ರಸ್ಟ್ ಅಧ್ಯಕ್ಷ ಜೋಗಲಕಾಷ್ಟಿ ಮುನೇಶ್ ಮಾತನಾಡಿ, ತಾಲ್ಲೂಕಿನಾದ್ಯಂತ 180 ಶಾಲೆಗಳಿಗೆ ಸುಣ್ಣ ಬಣ್ಣ ಬಳಿಯಲಾಗಿದೆ. ವಸತಿ ರಹಿತರಿಗೆ ಮನೆ ನಿರ್ಮಾಣ, ಅಂಗವಿಕಲರಿಗೆ ಗಾಲಿ ಕುರ್ಚಿ ಹಾಗೂ ಇತರೆ ಸಲಕರಣೆಗಳನ್ನು ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ಸೇವಾ ಕಾರ್ಯ ಮುಂದುವರೆಯಲಿದೆ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಆರ್.ಗಂಗರಾಮಯ್ಯ, ರಘುಪತಿ ರೆಡ್ಡಿ, ಪಿ. ಸೋಮೇಶ್, ಶಾರದ ಪ್ರೌಢಶಾಲೆಯ ಮುಖ್ಯ ಶಿಕ್ಷಕ ನಾರಾಯಣಸ್ವಾಮಿ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟಗಿರಿಯಪ್ಪ, ಜನಾರ್ಧನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT