ಬಂಗಾರಪೇಟೆ: ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲಾಗಿದೆ. ಯಾವುದೇ ಒತ್ತಡಕ್ಕೆ ಒಳಗಾಗದೆ, ಅರ್ಹರಿಗೆ ನೌಕರಿ ನೀಡಲಾಗಿದೆ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು.

ಪಟ್ಟಣದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ನೇಮಕಾತಿ ಆದೇಶ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಿಂದಿನ ಸರ್ಕಾರ ನೇಮಕಾತಿಯನ್ನು ಮಾಡದೆ, ಒಬ್ಬ ಅಂಗನವಾಡಿ ಕಾರ್ಯಕರ್ತೆಗೆ ಎರಡು–ಮೂರು ಅಂಗನವಾಡಿ ಕೇಂದ್ರಗಳ ಜವಾಬ್ದಾರಿಯನ್ನು ನೀಡಿ, ಕೆಲಸಗಾರರ ಮೇಲೆ ಒತ್ತಡ ಹೇರಿತ್ತು. ಇದನ್ನು ಮನಗಂಡ ನಮ್ಮ ಸರ್ಕಾರ ರಾಜ್ಯದಾದ್ಯಂತ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಮಾಡಲು ಆದೇಶ ನೀಡಲಾಗಿದೆ. ಅದರಂತೆ ನಮ್ಮ ತಾಲ್ಲೂಕಿನಲ್ಲಿ ಖಾಲಿ ಇದ್ದ 25 ಕಾರ್ಯಕರ್ತೆಯರನ್ನು ಹಾಗೂ 35 ಸಹಾಯಕಿಯರನ್ನು ಪಾರದರ್ಶಕವಾಗಿ ಆಯ್ಕೆ ಮಾಡಿಲಾಗಿದೆ ಎಂದು ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಮಾಡಲು ಕಷ್ಟವಾಗಿದ್ದು, ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ವೇತನವನ್ನು ಹೆಚ್ಚಿಸಲು ಹಾಗೂ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲು ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಪ್ರಸಕ್ತ ಸಾಲಿನಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಪ್ರಾರಂಭಿಸಲು ತಿರ್ಮಾನಿಸಿದ್ದು, ಇದೇ ಕಾರಣಕ್ಕೆ ದ್ವಿತೀಯ ಪಿಯುಸಿಯಲ್ಲಿ ಹೆಚ್ಚಿನ ಅಂಕ ಗಳಿಸಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅರ್ಹರನ್ನು ಶಿಕ್ಷಕರನ್ನಾಗಿ ಮೇಲ್ದರ್ಜೆಗೆ ಏರಿಸುವ ಉದ್ದೇಶವಿದೆ. ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಉತ್ತಮ ರೀತಿಯಲ್ಲಿ ಕೆಲಸ ಮಾಡಿದವರಿಗೆ ಉತ್ತಮ ಭವಿಷ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಸ್. ವೆಂಕಟೇಶಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮುನಿರಾಜು, ಸಿಪಿಎಂ ಗೀತಮ್ಮ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.