ಹೀಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿಯು ಇವರ ಕಫಾ ಮತ್ತು ರಕ್ತ ಮಾದರಿ ಸಂಗ್ರಹಿಸಿ ಕುರುಬರಪೇಟೆಯ ಮನೆಯಲ್ಲಿ ಕ್ವಾರಂಟೈನ್ ಮಾಡಿದ್ದರು. ಮಂಗಳವಾರ ರಾತ್ರಿ ಇವರ ವೈದ್ಯಕೀಯ ವರದಿ ಬಂದಿದ್ದು, ಸೋಂಕು ತಗುಲಿರುವುದು ಖಚಿತವಾಗಿದೆ.
ಪ್ರಯೋಗಾಲಯದ ವರದಿ ಬರುವ ಮುನ್ನವೇ ಇವರು ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಕಾರಾಗೃಹದಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದರು. ಇವರ ಸಂಪರ್ಕಕ್ಕೆ ಬಂದಿರುವ ವ್ಯಕ್ತಿಗಳ ಪತ್ತೆ ಕಾರ್ಯ ಮುಂದುವರಿದಿದೆ.