ಕೋಲಾರ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಡಿಎಂಆರ್ ಫೌಂಡೇಷನ್ ಸಂಸ್ಥೆಯಿಂದ ಮಾರ್ಚ್ 19ರ ಗುರುವಾರ ಸಂಜೆ 7 ಗಂಟೆಗೆ ನಗರದ ಜೂನಿಯರ್ ಕಾಲೇಜಿನ ಮೈದಾನದಲ್ಲಿ ಕೋಲಾರ ಯುಗಾದಿ ಉತ್ಸವ- 2026 ಆಯೋಜಿಸಲಾಗಿದೆ ಎಂದು ಫೌಂಡೇಷನ್ ಕಾರ್ಯದರ್ಶಿ ಡಿ.ಮುನಿರಾಜು ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿನ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 'ಉತ್ಸವದಲ್ಲಿ ಸಂಜೆ 7 ಗಂಟೆಗೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನೇತೃತ್ವದಲ್ಲಿ ಗಾಯಕರಾದ ನಟರಾಜು, ಅಖಿಲಾ ಪಜಿಮಣ್ಣಿ ಮ್ಯೂಸಿಕಲ್ ನೈಟ್ ನಡೆಸಿಕೊಡಲಿದ್ದಾರೆ. ರಾತ್ರಿ 8 ಗಂಟೆಗೆ ನಟರಾದ ರವಿಚಂದ್ರನ್, ಅನು ಪ್ರಭಾಕರ್, ಯುವರಾಜ್ ಕುಮಾರ್, ಸಂಜನಾ ಆನಂದ್ ಭಾಗವಹಿಸಿ ಸಾರ್ವಜನಿಕರನ್ನು ರಂಜಿಸಲಿದ್ದಾರೆ. ಅನುಶ್ರೀ ನಿರೂಪಣೆ ಮಾಡಲಿದ್ದಾರೆ' ಎಂದರು.

ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಕೋಲಾರ ಜಿಲ್ಲೆಯ ಐವರು ಸಾಧಕರಿಗೆ ಈ ವೇಳೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸುಮಾರು 20 ಸಾವಿರ ಮಂದಿ ಭಾಗವಹಿಸಲು ಆಸನದ ಮತ್ತು ವೇದಿಕೆ ವ್ಯವಸ್ಥೆಗಳನ್ನು ಬೆಂಗಳೂರಿನ ಸಂಸ್ಥೆ ನಿರ್ವಹಿಸಲಿದೆ. ಎಲ್ಲರಿಗೂ ಉಚಿತ ಪ್ರವೇಶವಿದ್ದು, ಯಾವುದೇ ರೀತಿ ಪಾಸ್ ವ್ಯವಸ್ಥೆಗಳು ಮಾಡಿಲ್ಲ. ಮೊದಲು ಬಂದವರು ತಮಗೆ ಸೂಕ್ತವಾದ ಸ್ಥಳದಲ್ಲಿ ಆಸೀನರಾಗಬಹುದಾಗಿದೆ ಎಂದು ವಿವರಿಸಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಕೆ.ಚಂದ್ರಶೇಖರ್ ಮಾತನಾಡಿ, 'ಗಣ್ಯರಿಗೆ ಹಾಗೂ ಪತ್ರಕರ್ತರಿಗೆ ಮಾತ್ರ ಪ್ರತ್ಯೇಕ ಗ್ಯಾಲರಿ ಮಾಡಲಾಗಿದೆ. ಎಲ್ಲರಿಗೂ ಒಂದೇ ಮಾರ್ಗದ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ.ಆರ್.ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ಹಾಗೂ ಜಿಲ್ಲಾ ಪಂಚಾಯತಿ ಸಿಇಒ ಡಾ.ಪ್ರವೀಣ್ ಪಿ. ಬಾಗೇವಾಡಿ ಸೇರಿದಂತೆ ಅನೇಕ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕಾರ ನೀಡಬೇಕು' ಎಂದು ಮನವಿ ಮಾಡಿದರು.

ಎಪಿಎಂಸಿ ಪುಟ್ಟರಾಜು ಮಾತನಾಡಿ, 'ಡಿ.ದೇವರಾಜ್ ಅವರು ಬೆಂಗಳೂರಿಗೆ ವರ್ಗಾವಣೆಯಾಗಿ ಡಿಐಜಿಪಿ ಆಗಿದ್ದರೂ ತವರಿನ ಜನತೆ ಮೇಲಿನ ಪ್ರೀತಿಯಿಂದ ತಮ್ಮ ಪೋಷಕರ ಹೆಸರಿನಲ್ಲಿ ನಡೆಸುತ್ತಿರುವ ಹಲವಾರು ಸೇವಾ ಕಾರ್ಯಕ್ರಮಗಳಲ್ಲಿ ಈ ಕಾರ್ಯಕ್ರಮವೂ ಒಂದು' ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಜಿ.ಸುರೇಶ್ಕುಮಾರ್, ಖಜಾಂಚಿ ಬಿ.ಎಲ್.ರಾಜೇಂದ್ರ ಸಿಂಹ, ಡಿಎಂಆರ್ ಫೌಂಡೇಶನ್ ಬೆಗ್ಲಿ ವೆಂಕಟೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.