ಮಂಗಳವಾರ, ಅಕ್ಟೋಬರ್ 26, 2021
21 °C

ಅಂಬ್ಲಿಕಲ್ ಗ್ರಾ.ಪಂ. ಉಪಾಧ್ಯಕ್ಷರ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಂಗಲಿ: ಅಂಬ್ಲಿಕಲ್ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಕೊತ್ತೂರು ಮುನೆಪ್ಪ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷರಾಗಿದ್ದ ಎ.ಎಂ. ಶಂಕರಪ್ಪ ಇತ್ತೀಚೆಗೆ ಕೊರೊನಾ ದಿಂದ ಸಾವನ್ನಪ್ಪಿದ್ದರಿಂದ ಉಪಾಧ್ಯಕ್ಷರ ಸ್ಥಾನ ಖಾಲಿಯಾಗಿತ್ತು.  ಚುನಾವಣಾಧಿಕಾರಿ ರವೀಂದ್ರಕುಮಾರ್ ನೇತೃತ್ವದಲ್ಲಿ ಇತ್ತೀಚೆಗೆ ಪಂಚಾಯಿತಿ ಕೇಂದ್ರದಲ್ಲಿ ಚುನಾವಣೆ ನಡೆಯಿತು. ಎಲ್ಲಾ ಸದಸ್ಯರು ಮುನೆಪ್ಪ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೂಜಾ ಚಲಪತಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ. ಕೃಷ್ಣಪ್ಪ, ಮರೇರು ವೆಂಕಟರವಣಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು