ಕೋಲಾರ: ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕರಾಗಿ ಸಾಮಾನ್ಯ ಕ್ಷೇತ್ರದಿಂದ ಸೊಣ್ಣೇಗೌಡ ಅವಿರೋಧ ಆಯ್ಕೆಯಾಗಿದ್ದಾರೆ.

ಬ್ಯಾಂಕ್‌ನ ಆಡಳಿತ ಮಂಡಳಿಯ 14 ಕ್ಷೇತ್ರಕ್ಕೆ ಚುನಾವಣೆ ನಿಗದಿಯಾಗಿತ್ತು. ಈ ಪೈಕಿ 12 ಕ್ಷೇತ್ರಗಳಿಗೆ ಅವಿರೋಧ ಆಯ್ಕೆಯಾಗಿದೆ. ಉಳಿದ 2 ಕ್ಷೇತ್ರಗಳಿಗೆ ಜ.26ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾನ್ಯ ಕ್ಷೇತ್ರದಿಂದ ಕೆಂದಟ್ಟಿ ಎ.ಶಿವಕುಮಾರ್, ವಿಟ್ಟಪ್ಪನಹಳ್ಳಿ ವೆಂಕಟೇಶ್, ಚಿಕ್ಕಹಸಾಳ ಎಂ.ಮಂಜುನಾಥ್, ವೆಲಗಲಬುರ್ರೆ ವಿ.ಎ.ಶಶಿಧರ್, ಮಹಿಳಾ ಕ್ಷೇತ್ರದಿಂದ ಗರುಡಪಾಳ್ಯದ ಬಿ.ಎನ್.ಶೋಭಾ, ಸಿಂಗೊಂಡಹಳ್ಳಿಯ ಸುನಂದಮ್ಮ, ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಕಾಮಾಂಡಹಳ್ಳಿಯ ಕೆ.ಎಂ.ಗೋವಿಂದಪ್ಪ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ಹರಳಕುಂಟೆ ನಾರಾಯಣಸ್ವಾಮಿ ಅವರು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಎಂದು ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಎ ಕ್ಷೇತ್ರದಿಂದ ರಾಜಕಲ್ಲಹಳ್ಳಿಯ ಕೆ.ಸಿ.ಮಂಜುನಾಥ್, ಹಿಂದುಳಿದ ವರ್ಗಗಳ ಬಿ ಕ್ಷೇತ್ರದಿಂದ ಜಡೇರಿ ಗ್ರಾಮದ ಜೆ.ಎಂ.ರಾಧಾಕೃಷ್ಣ ಹಾಗೂ ಸಾಲಗಾರರಲ್ಲದ ಕ್ಷೇತ್ರದಿಂದ ಜಿ.ಅಮರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ ಕ್ಷೇತ್ರಗಳಾದ ನರಸಾಪುರ ಹಾಗೂ ಸುಗಟೂರು ಸಾಮಾನ್ಯ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.