ಬಂಗಾರಪೇಟೆ: ದಲಿತ ಮತ್ತು ಒಕ್ಕಲಿಗ ಸಮುದಾಯದ ವ್ಯಕ್ತಿಗಳಿಗೆ ಅವಮಾನ ಮಾಡಿರುವ ಮುನಿರತ್ನ ಅವರ ಶಾಸಕ ಸ್ಥಾನದಿಂದ ವಜಾಗೊಳಿಸಬೇಕೆಂದು ಕೋಲಾರ ಜಿಲ್ಲಾ ಕಾಂಗ್ರೆಸ್ ಎಸ್.ಸಿ ವಿಭಾಗದ ಮಾಧ್ಯಮ ವಕ್ತಾರ ಆ.ನಾ ಹರೀಶ್ ಆಗ್ರಹಿಸಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಂತ ಕೀಳು ಮಟ್ಟದ ಪದಗಳನ್ನು ಬಳಸಿದ್ದಾರೆ. ಅವರದೇ ಪಕ್ಷದ ಎಸ್.ಸಿ ಮೋರ್ಚಾದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಖಂಡಿಸದೆ ಇರುವುದು ನಾಚಿಕೆಗೇಡು ಸಂಗತಿ ಎಂದು ಟೀಕಿಸಿದರು.
ಒಕ್ಕಲಿಗ ಸಮುದಾಯದ ಗುತ್ತಿಗೆದಾರರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ದಲಿತ ಸಮುದಾಯವನ್ನು ಹೀನವಾಗಿ ತಮ್ಮ ಪದ ಬಳಕೆಯಲ್ಲಿ ಸಂಬೋಧಿಸಿದ್ದಾರೆ. ಇಂತಹ ವ್ಯಕ್ತಿ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಧ್ವನಿ ಎತ್ತುತ್ತಿಲ್ಲ ಎಂದು ಪ್ರಶ್ನಿಸಿದರು.