ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ಸವಲತ್ತು ಸಮರ್ಪಕವಾಗಿ ಬಳಸಿ

Last Updated 6 ಏಪ್ರಿಲ್ 2021, 15:41 IST
ಅಕ್ಷರ ಗಾತ್ರ

ಕೋಲಾರ: ‘ಗ್ರಾಮದ ಸಮಗ್ರ ಅಭಿವೃದ್ಧಿಗೆ ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಗ್ರಾಮವನ್ನು ಮಾದರಿಯಾಗಿಸಲು ಸಾರ್ವಜನಿಕರು ಸಹಕಾರ ನೀಡಬೇಕು’ ಎಂದು ತಾಲ್ಲೂಕಿನ ಸೂಲೂರು ಗ್ರಾ.ಪಂ ಸದಸ್ಯೆ ಎಸ್.ಎಂ.ರೂಪಾ ಮನವಿ ಮಾಡಿದರು.

ಸೂಲೂರು ಗ್ರಾ.ಪಂ ವತಿಯಿಂದ ತಾಲ್ಲೂಕಿನ ನಾಗಲಾಪುರ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಾರ್ಡ್ ಸಭೆಯಲ್ಲಿ ಮಾತನಾಡಿ, ‘ಸುತ್ತಮುತ್ತಲ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸಬೇಕು. ಈ ನಿಟ್ಟಿನಲ್ಲಿ ಗ್ರಾಮದಲ್ಲಿ ಸದ್ಯದಲ್ಲೇ ನೀರಿನ ಘಟಕ ಸ್ಥಾಪಿಸುತ್ತೇವೆ’ ಎಂದು ಭರವಸೆ ನೀಡಿದರು.

‘ಗ್ರಾ.ಪಂಗಳಿಗೆ ಬರುವ ಅನುದಾನಗಳು ಸಂಪೂರ್ಣ ಸದ್ಬಳಕೆ ಆಗಬೇಕು. ಅನುದಾನ ಬಳಕೆಯಾಗದೆ ಸರ್ಕಾರಕ್ಕೆ ವಾಪಸ್‌ ಹೋಗಬಾರದು. ಗ್ರಾಮದಲ್ಲಿ ಸಿ.ಸಿ ರಸ್ತೆಗಳನ್ನು ನಿರ್ಮಾಣ ಮಾಡಬೇಕು. ನರೇಗಾ ಅನುದಾನದಲ್ಲಿನ ಹೆಚ್ಚಿನ ಕಾಮಗಾರಿಗಳನ್ನು ಮಾಡಲು ಅವಕಾಶವಿದೆ. ನರೇಗಾ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ರಸ್ತೆ ಮತ್ತು ಚರಂಡಿ ನಿರ್ಮಾಣದ ಜತೆಗೆ ಕೆರೆಯಲ್ಲಿ ಹೂಳೆತ್ತಲಾಗುತ್ತದೆ’ ಎಂದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಖಜಾಂಚಿ ಕೆ.ವಿಜಯ್, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಬಾಲಾಜಿ, ಗ್ರಾಮಸ್ಥರಾದ ಸಿದ್ದಲಿಂಗಯ್ಯ, ಗಜೇಂದ್ರ, ಪಾಟೀಲ್, ಚಂದ್ರಪ್ಪ, ಮುನಿಕೃಷ್ಣ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT