ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೆಂಟಿಲೇಟರ್‌ ಸಮರ್ಪಕವಾಗಿ ಬಳಸಿ

Last Updated 8 ಸೆಪ್ಟೆಂಬರ್ 2020, 16:30 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲಾ ಕೇಂದ್ರದ ನರಸಿಂಹರಾಜ (ಎಸ್‌ಎನ್‌ಆರ್‌) ಜಿಲ್ಲಾ ಆಸ್ಪತ್ರೆಯಲ್ಲಿನ ವೆಂಟಿಲೇಟರ್‌ಗಳನ್ನು ಸಮರ್ಪಕವಾಗಿ ಬಳಕೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿ ಮಂಗಳವಾರ ನಡೆದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಜಿಲ್ಲಾ ಮಟ್ಟದ ಕುಂದು ಕೊರತೆ ಪರಿಹಾರ ಸಮಿತಿ ಸಭೆಯಲ್ಲಿ ಮಾತನಾಡಿ, ‘ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿ ಸದ್ಯ 40 ವೆಂಟಿಲೇಟರ್‌ಗಳಿವೆ. ಅಗತ್ಯವಿದ್ದರೆ ವೆಂಟಿಲೇಟರ್‌ ಬಳಕೆ ಮಾಡಿ’ ಎಂದು ತಿಳಿಸಿದರು.

‘ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಬರುವ ಜನರಿಗೆ ಸರ್ಕಾರ ಜಾರಿಗೆ ತಂದಿರುವ ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ಇರುವುದಿಲ್ಲ. ಆದ್ದರಿಂದ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ಕೊಡಲು ಆರೋಗ್ಯ ಮಿತ್ರರನ್ನು ನೇಮಿಸಬೇಕು’ ಎಂದು ಸೂಚನೆ ನೀಡಿದರು.

‘ಆಯುಷ್ಮಾನ್ ಭಾರತ್ ಯೋಜನೆಯಡಿ ಆಸ್ಪತ್ರೆಗಳಿಗೆ ದಾಖಲಾದ ರೋಗಿಗಳಿಗೆ ಸೂಕ್ತ ಮಾಹಿತಿ ನೀಡಬೇಕು. ಸರ್ಕಾರ ನಿಯಮಾವಳಿ ಅನುಸರಿಸಿ ಗುಣಮಟ್ಟದ ವೈದ್ಯಕೀಯ ಸೇವೆ ನೀಡಬೇಕು. ಪ್ರತಿ ತಿಂಗಳು ಜಿಲ್ಲಾ ಮಟ್ಟದ ಕುಂದು ಕೊರತೆ ಪರಿಹಾರ ಸಮಿತಿ ಸಭೆ ನಡೆಸಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಚಿನ್ನಸ್ವಾಮಿಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್‌.ಎನ್‌.ವಿಜಯ್‌ಕುಮಾರ್, ಆಯುಷ್ಮಾನ್ ಭಾರತ್ ಯೋಜನೆ ಜಿಲ್ಲಾ ನೋಡಲ್ ಅಧಿಕಾರಿ ಡಾ.ಎನ್.ಸಿ.ನಾರಾಯಣಸ್ವಾಮಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಪ್ರಾದೇಶಿಕ ಸಲಹೆಗಾರ ಡಾ.ರಾಜಣ್ಣ, ಜಿಲ್ಲಾ ಸಮನ್ವಯಾಧಿಕಾರಿ ಡಾ.ಗಿರೀಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT