ಕೋಲಾರ: ಜಿಲ್ಲೆಯಲ್ಲಿ 2ನೇ ಹಂತದಲ್ಲಿ ಕೋವಿಡ್ ಲಸಿಕೆ ನೀಡಿಕೆ ಪ್ರಕ್ರಿಯೆ ಸೋಮವಾರದಿಂದ ಆರಂಭವಾಗಿದ್ದು, ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವಿವಿಧ ಇಲಾಖೆಗಳ 300 ಮಂದಿಗೆ ಲಸಿಕೆ ಹಾಕಲಾಯಿತು.

ಆರೋಗ್ಯ ಇಲಾಖೆಯು ಸಾಕಷ್ಟು ಸಿದ್ಧತೆಯೊಂದಿಗೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಗಳು, ಜಿಲ್ಲಾ ಆಸ್ಪತ್ರೆಗಳು ಹಾಗೂ ನಗರ ಪ್ರದೇಶದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏಕಕಾಲಕ್ಕೆ ಲಸಿಕೆ ವಿತರಣೆ ಪ್ರಕ್ರಿಯೆ ಆರಂಭಿಸಿತು.

ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್. ನಗರಾಭಿವೃದ್ಧಿ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ 6,200 ಸಿಬ್ಬಂದಿಗೆ 2ನೇ ಹಂತದಲ್ಲಿ ಲಸಿಕೆ ನೀಡುವ ಗುರಿಯಿದೆ. ಜಿಲ್ಲಾಧಿಕಾರಿ ಸಿ.ಸತ್ಯಭಾಮ ಒಳಗೊಂಡಂತೆ ಹಲವು ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೋವಿಶೀಲ್ಡ್ ಲಸಿಕೆ ಪಡೆದರು.

ಜಿಲ್ಲಾ ಕೇಂದ್ರದ ಎಸ್‌ಎನ್‌ಆರ್ ಆಸ್ಪತ್ರೆ, ದರ್ಗಾ ಮೊಹಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಕೆಜಿಎಫ್ ಸರ್ಕಾರಿ ಆಸ್ಪತ್ರೆ, ಮಾಲೂರು, ಬಂಗಾರಪೇಟೆ, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5ರವರೆಗೆ ಲಸಿಕೆ ನೀಡಲಾಯಿತು. ಗರ್ಭಿಣಿ ಹಾಗೂ ಬಾಣಂತಿಯರಾಗಿರುವ ಸಿಬ್ಬಂದಿಯನ್ನು ಹೊರತುಪಡಿಸಿ 18 ವರ್ಷ ಮೇಲ್ಪಟ್ಟವರಿಗೆ ತಲಾ 0.5 ಎಂಎಲ್‌ನ ಒಂದು ಡೋಸ್ ಲಸಿಕೆ ಹಾಕಲಾಯಿತು.

ಕೊಠಡಿ ಮೀಸಲು: ಪ್ರತಿ ಲಸಿಕಾ ಕೇಂದ್ರದಲ್ಲಿ ನಿರೀಕ್ಷಣಾ ಕೊಠಡಿ, ಲಸಿಕೆ ಕೊಠಡಿ ಮತ್ತು ನಿಗಾ ಕೊಠಡಿ ಸೇರಿದಂತೆ 3 ಕೊಠಡಿ ಮೀಸಲಿಡಲಾಗಿತ್ತು. ಪ್ರತಿ ಕೇಂದ್ರದಲ್ಲಿ ತಲಾ 5 ಮಂದಿ ಲಸಿಕೆ ಅಧಿಕಾರಿಗಳು ಕಾರ್ಯ ನಿರ್ವಹಿಸಿದರು.ಮಾಸ್ಕ್ ಧರಿಸಿ ಕೇಂದ್ರಗಳಿಗೆ ಬಂದ ಫಲಾನುಭವಿಗಳ ದೇಹದ ಉಷ್ಣತೆಯನ್ನು ಸಿಬ್ಬಂದಿಯು ಪರಿಶೀಲಿಸಿದರು.

ಸ್ಯಾನಿಟೈಸರ್‌ನಿಂದ ಕೈಗಳನ್ನು ಸ್ವಚ್ಛ ಮಾಡಿಕೊಂಡ ಬಳಿಕ ಸಿಬ್ಬಂದಿಯು ತಮ್ಮ ಪಾಳಿಗಾಗಿ ನಿರೀಕ್ಷಣಾ ಕೊಠಡಿಯಲ್ಲಿ ಕಾದು ಕುಳಿತರು. ನಿರೀಕ್ಷಣಾ ಕೊಠಡಿಯಲ್ಲಿ 5ರಿಂದ 6 ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಲಸಿಕೆ ನೀಡಿಕೆ ಬಳಿಕ ಅವರನ್ನು ಅರ್ಧ ತಾಸು ನಿಗಾ ಕೊಠಡಿಯಲ್ಲಿ ಕೂರಿಸಲಾಯಿತು.

ಲಸಿಕೆ ಪಡೆದವರಿಗೆ ಯಾವುದೇ ಅಡ್ಡ ಪರಿಣಾಮವಾಗಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಂಡ ನಂತರ ಕೇಂದ್ರದಿಂದ ಕಳುಹಿಸಲಾಯಿತು. ಲಸಿಕೆ ಪಡೆದ ಸಿಬ್ಬಂದಿಯು ಪ್ರತಿನಿತ್ಯದಂತೆ ಕರ್ತವ್ಯಕ್ಕೆ ಹಾಜರಾದರು.

ಕೋವಿಡ್ ಲಸಿಕೆ ನೀಡಿಕೆಯ ಎಲ್ಲಾ ಹಂತಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಯಿತು. ದಾಖಲಾತಿ ಪರಿಶೀಲನೆ, ಹೆಸರು ನೋಂದಣಿ, ಲಸಿಕೆ ವಿತರಣೆ ಸೇರಿದಂತೆ ಎಲ್ಲಾ ಮಾಹಿತಿಯನ್ನು ಕೇಂದ್ರ ಸರ್ಕಾರದ ಕೋ–ವಿನ್ ತಂತ್ರಾಂಶದಲ್ಲಿ (ಪೋರ್ಟಲ್) ದಾಖಲಿಸಲಾಯಿತು.

ಶೇ 64.28 ಸಾಧನೆ: ಮೊದಲ ಹಂತದಲ್ಲಿ 14 ಸಾವಿರ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕುವ ಗುರಿಯಿತ್ತು. ಅಂತಿಮವಾಗಿ ಜ.16ರಿಂದ ಈವರೆಗೆ ಮೊದಲ ಹಂತದಲ್ಲಿ 9 ಸಾವಿರ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕುವ ಮೂಲಕ ಶೇ 64.28 ಗುರಿ ಸಾಧನೆಯಾಗಿದೆ. ಉಳಿದ 5 ಸಾವಿರ ಆರೋಗ್ಯ ಕಾರ್ಯಕರ್ತರನ್ನು 2ನೇ ಹಂತಕ್ಕೆ ಸೇರ್ಪಡೆ ಮಾಡಿಕೊಂಡು ಲಸಿಕೆ ನೀಡಲು ನಿರ್ಧರಿಸಲಾಗಿದೆ.

ಮಂಗಳವಾರ ಪೊಲೀಸ್ ಮತ್ತು ಗೃಹರಕ್ಷಕ ದಳ ಸಿಬ್ಬಂದಿ ಸೇರಿದಂತೆ 1 ಸಾವಿರ ಮಂದಿಗೆ ಲಸಿಕೆ ಹಾಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.