ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಲ್ಲಭಭಾಯಿ ಪಟೇಲ್‌ ಉಕ್ಕಿನ ಮನುಷ್ಯ

Last Updated 31 ಅಕ್ಟೋಬರ್ 2020, 15:17 IST
ಅಕ್ಷರ ಗಾತ್ರ

ಕೋಲಾರ: ‘ಉಕ್ಕಿನ ಮನುಷ್ಯ ಎಂದೇ ಹೆಸರಾಗಿರುವ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಶ್ರಮದಿಂದ ಏಕೀಕೃತ ಭಾರತ ನಿರ್ಮಾಣವಾಗಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಕೆ.ಎನ್‌.ವೇಣುಗೋಪಾಲ್‌ ಹೇಳಿದರು.

ಇಲ್ಲಿ ಶನಿವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್‌ರ ಜನ್ಮ ದಿನಾಚರಣೆಯಲ್ಲಿ ಮಾತನಾಡಿ, ‘550ಕ್ಕೂ ಹೆಚ್ಚು ಪ್ರಾಂತ್ಯಗಳಾಗಿ ಹಂಚಿ ಹೋಗಿದ್ದ ದೇಶವನ್ನು ಒಗ್ಗೂಡಿಸುವುದು ಸುಲಭವಲ್ಲ. ಆದರೆ, ವಲ್ಲಭಭಾಯಿ ಪಟೇಲ್‌ ಪ್ರಾಂತ್ಯಗಳನ್ನು ಒಗ್ಗೂಡಿಸಿ ಸಂಯುಕ್ತ ಭಾರತ ಕಟ್ಟಿದ್ದರು. ಈ ಕೆಲಸ ಬೇರೆ ಯಾರಿಂದಲೂ ಸಾಧ್ಯವಾಗುತ್ತಿರಲಿಲ್ಲ’ ಎಂದರು.

‘ವಲ್ಲಭಭಾಯಿ ಪಟೇಲ್‌ ಅಪ್ರತಿಮ ವ್ಯಕ್ತಿ. ಅವರ ತತ್ವಾದರ್ಶ ಯುವಕ ಯುವತಿಯರಿಗೆ ದಾರಿದೀಪ. ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಅವರು ಸಮಗ್ರತೆ, ಏಕತೆ, ಸಂಘಟನೆ ಹಾಗೂ ಅಧಿಕಾರ ವಿಕೇಂದ್ರೀಕರಣ ಜಾರಿಗೆ ಶ್ರಮಿಸಿದರು’ ಎಂದು ಸ್ಮರಿಸಿದರು.

‘ಮಹರ್ಷಿ ವಾಲ್ಮೀಕಿಯು ರಾಮಾಯಣ ರಚಿಸಿದ ಮಹಾನ್ ಋಷಿ ಹಾಗೂ ಕವಿ. ವಾಲ್ಮೀಕಿ ಜಯಂತಿಯು ಒಂದು ಜಾತಿಗೆ ಸೀಮಿತವಾದ ಜಯಂತಿಯಲ್ಲ. ದೇಶದ ಪ್ರತಿ ಸಮುದಾಯದ ಜಯಂತಿ’ ಎಂದು ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.

ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಕೆ.ಎಂ.ಮಂಜುನಾಥ್, ಗ್ರಾಮಾಂತರ ಘಟಕದ ಅಧ್ಯಕ್ಷ ಸಿ.ಡಿ.ರಾಮಚಂದ್ರೇಗೌಡ, ನಗರ ಘಟಕದ ಅಧ್ಯಕ್ಷ ಎಚ್.ಎಂ.ತಿಮ್ಮರಾಯಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಜಿ.ಸಿ.ರಾಜೇಶ್, ಕೆ.ಜಿ.ಮಂಜುನಾಥ್ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT