ಗುರುವಾರ , ಆಗಸ್ಟ್ 11, 2022
23 °C

ವರ್ತೂರು ಪ್ರಕಾಶ್ ಅಪಹರಣ: ಆರೋಪಿ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಸಂಬಂಧ ಪೊಲೀಸರು ಆರೋಪಿಯೊಬ್ಬನನ್ನು ಶುಕ್ರವಾರ ರಾತ್ರಿ ವಶಕ್ಕೆ ತೆಗೆದುಕೊಂಡಿದ್ದು, ಪ್ರಕರಣ ಇತರೆ ಆರೋಪಿಗಳು ಬಂಧನ ಭೀತಿಯಿಂದ ಪ್ರವಾಸಕ್ಕೆ ಹೋಗಿದ್ದಾರೆ ಎಂದು ಗೊತ್ತಾಗಿದೆ.

ವರ್ತೂರು ಪ್ರಕಾಶ್‌ ಅವರನ್ನು ಅಪಹರಿಸಿದ ದುಷ್ಕರ್ಮಿಗಳು ವೃತ್ತಿಪರ ಅಪಹರಣಕಾರರು. ಪ್ರಕರಣದಲ್ಲಿ ಪ್ರಕಾಶ್‌ರ ಪರಿಚಿತ ವ್ಯಕ್ತಿಗಳ ಪಾತ್ರವಿದೆ. ಮೊಬೈಲ್‌ ಕರೆಗಳ ಮಾಹಿತಿ ಆಧರಿಸಿ ಒಬ್ಬ ಆರೋಪಿಯನ್ನು ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಂಡಿದ್ದೇವೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ವರ್ತೂರು ಪ್ರಕಾಶ್‌ರ ಫಾರ್ಮ್‌ಹೌಸ್‌ನಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ಆಂಧ್ರಪ್ರದೇಶದ ಮಹಿಳೆಯೊಬ್ಬರ ಕೈವಾಡವಿರುವ ಶಂಕೆಯಿದೆ. ಹಣಕಾಸು ವ್ಯವಹಾರದಲ್ಲಿನ ಭಿನ್ನಾಭಿಪ್ರಾಯ ಸೇರಿದಂತೆ ಹಲವು ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದೇವೆ. ಅಪಹರಣಕಾರರು ಮಹಾರಾಷ್ಟ್ರ ರಾಜ್ಯದವರಲ್ಲ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಬೆಂಗಳೂರು ಹಾಗೂ ಸುತ್ತಮುತ್ತಲಿನ ವೃತ್ತಿಪರ ದುಷ್ಕರ್ಮಿಗಳ ಗುಂಪು ಈ ಕೃತ್ಯ ಎಸಗಿದೆ ಎಂದು ಉನ್ನತ ಪೊಲೀಸ್‌ ಮೂಲಗಳು ತಿಳಿಸಿವೆ.

ಸಿಕ್ಕಿಬಿದ್ದಿರುವ ಆರೋಪಿಯು ಪ್ರಕರಣದ ಇತರೆ ಆರೋಪಿಗಳ ಬಗ್ಗೆ ಮಾಹಿತಿ ನೀಡಿದ್ದಾನೆ. ಹಣಕ್ಕಾಗಿಯೇ ಈ ಕೃತ್ಯ ಎಸಗಿದ್ದಾಗಿ ಆತ ಹೇಳಿಕೆ ನೀಡಿದ್ದಾನೆ. ವರ್ತೂರು ಪ್ರಕಾಶ್‌ ಅವರು ದನದ ವ್ಯಾಪಾರಿ ನಯಾಜ್‌ ಮೂಲಕ ಕೊಡಿಸಿದ ₹ 48 ಲಕ್ಷ ಹಣದಲ್ಲಿ ಇತರೆ ಆರೋಪಿಗಳು ಪ್ರವಾಸಕ್ಕೆ ಹೋಗಿದ್ದಾರೆ ಎಂದು ಆತ ತಿಳಿಸಿದ್ದಾನೆ ಎಂದು ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು