ಬುಧವಾರ, ಆಗಸ್ಟ್ 17, 2022
29 °C

ವರ್ತೂರು ಅಪಹರಣ: ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಕವಿರಾಜ್‌ ಎಂಬಾತನನ್ನು ಪೊಲೀಸರು ಶನಿವಾರ ಬಂಧಿಸಿದ್ದು, ಆರೋಪಿಗಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ವರ್ತೂರು ಪ್ರಕಾಶ್‌ ಅವರಿಗೆ ಪರಿಚಿತನಾಗಿದ್ದ ಕವಿರಾಜ್‌ ಘಟನೆ ನಂತರ ತಮಿಳುನಾಡಿಗೆ ಹೋಗಿ ತಲೆಮರೆಸಿಕೊಂಡಿದ್ದ. ಪ್ರಕರಣ ಸಂಬಂಧ ಬಂಧಿಸಲಾದ ಇತರೆ ಆರೋಪಿಗಳು ನೀಡಿದ ಮಾಹಿತಿ ಹಾಗೂ ಕವಿರಾಜ್‌ನ ಮೊಬೈಲ್‌ ಕರೆಗಳ ವಿವರ ಆಲಿಸಿ ಆತನನ್ನು ಪತ್ತೆ ಹಚ್ಚಲಾಯಿತು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆ ಕಾರ್ಯ ಮುಂದುವರಿದಿದೆ. ಆತನನ್ನು ಸದ್ಯದಲ್ಲೇ ಬಂಧಿಸುತ್ತೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.