ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣ ಸಂಬಂಧ ಶುಕ್ರವಾರ 4 ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದು, ಬಂಧಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಪ್ರಕರಣದಲ್ಲಿ ಮೊದಲು ಸಿಕ್ಕಿಬಿದ್ದಿದ್ದ ಇಬ್ಬರು ಆರೋಪಿಗಳು ನೀಡಿದ ಮಾಹಿತಿ ಆಧರಿಸಿ ಬೆಂಗಳೂರಿನಲ್ಲಿ 4 ಮಂದಿಯನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಗಳ ಮೇಲೆ ತೀವ್ರ ನಿಗಾ ಇರಿಸಿದ್ದು, ಸದ್ಯದಲ್ಲೇ ಅವರನ್ನೂ ಬಂಧಿಸುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಈವರೆಗೆ 30ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಲಾಗಿದೆ. ಬಂಧಿತರ ಮತ್ತಷ್ಟು ಸಂಖ್ಯೆ ಹೆಚ್ಚಲಿದೆ. ಪ್ರಮುಖ ಆರೋಪಿಗಳು ಸಿಕ್ಕಿಬಿದ್ದರೆ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆರೋಪಿಗಳು ವರ್ತೂರು ಪ್ರಕಾಶ್ ಹಾಗೂ ಅವರ ಕಾರು ಚಾಲಕ ಸುನಿಲ್‌ರನ್ನು ನ.25ರಂದು ಅಪಹರಿಸಿದ್ದರು. ನಂತರ ವಿವಿಧೆಡೆ ಸುತ್ತಾಡಿಸಿ ಹಲ್ಲೆ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.