ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಗಾರಪೇಟೆ: ವೇಮನ ಜಯಂತಿ ಆಚರಣೆ

Last Updated 20 ಜನವರಿ 2021, 3:06 IST
ಅಕ್ಷರ ಗಾತ್ರ

ಬಂಗಾರಪೇಟೆ: ಜಯಂತಿಗಳ ಆಚರಣೆಗೆ ಅಧಿಕಾರಿಗಳ ಹಾಜರು ಕಡ್ಡಾಯ ಎಂದು ತಹಶೀಲ್ದಾರ್ ಎಂ.ದಯಾನಂದ ಹೇಳಿದರು.

ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಆಯೋಜಿಸಿದ್ದ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೆಲ ಅಧಿಕಾರಿಗಳು ಮಾತ್ರ ಜಯಂತಿಗಳಿಗೆ ಹಾಜರಾಗುತ್ತಿದ್ದಾರೆ. ಮುಂದಿನ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಎಲ್ಲ ಅಧಿಕಾರಿಗಳು ತಪ್ಪದೆ ಹಾಜರಾಗಬೇಕು ಎಂದು ಸೂಚಿಸಿದರು.

ವೇಮನ ಕವಿ ಅವರ ಬರಹಗಳು ಸ್ಫೂರ್ತಿದಾಯಕ. ಅವರ ಜೀವನವೇ ಒಂದು ದೊಡ್ಡ ಗ್ರಂಥ. ಜೀವನ ಹೇಗೆ ಇರಬಾರದು. ಹೇಗೆ ಇರಬೇಕು ಎನ್ನುವುದಕ್ಕೆ ವೇಮನ ಅವರೇ ನಿದರ್ಶನ ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ವೆಂಕಟೇಶಪ್ಪ, ಪುರಸಭೆ ಮುಖ್ಯಾಧಿಕಾರಿ ಶ್ರೀಧರ್, ತಾಲ್ಲೂಕು ಆರೋಗ್ಯ ಅಧಿಕಾರಿ ಸರಸ್ವತಿ, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಆಸಿಫ್ ಅಲಿ, ರವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT