ವಾಹನ ಅಪಘಾತ: ಗ್ರಾ.ಪಂ ಸದಸ್ಯ ಸಾವು

ಶುಕ್ರವಾರ, ಮೇ 24, 2019
33 °C
ಸುತ್ತಮುತ್ತಲ ಗ್ರಾಮಸ್ಥರಿಂದ ಹೆದ್ದಾರಿ ಬಂದ್

ವಾಹನ ಅಪಘಾತ: ಗ್ರಾ.ಪಂ ಸದಸ್ಯ ಸಾವು

Published:
Updated:
Prajavani

ಕೋಲಾರ: ತಾಲ್ಲೂಕಿನ ಮಡೆರಹಳ್ಳಿ ಗೇಟ್‌ ಸಮೀಪ ಬೆಂಗಳೂರು ಚೆನ್ನೈ ರಾಷ್ಟ್ರೀಯ ಹೆದ್ದಾರಿ75ರಲ್ಲಿ ಅಪಚಿತ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು, ಮಡೆರಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರ ರವಿ (40) ಭಾನುವಾರ ಮುಂಜಾನೆ ಮೃತಪಟ್ಟಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಹೆದ್ದಾರಿ ಬಂದ್ ಮಾಡಿ ಧರಣಿ ನಡೆಸಿದರು.

ತಾಲ್ಲೂಕಿನ ಮಡೆರಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ರವಿ ಪತ್ನಿಯೊಂದಿಗೆ ಎಂದಿನಂತೆ ಭಾನುವಾರ ಮುಂಜಾನೆ ಗೇಟ್‌ನಲ್ಲಿರುವ ಅಂಗಡಿ ತೆರೆಯಲು ಹೋಗುತ್ತಿದ್ದ. ಈ ಸಂದರ್ಭದಲ್ಲಿ ಕೋಲಾರದಿಂದ ಬೆಂಗಳೂರಿಗೆ ಹೊರಟ್ಟಿದ್ದ ವಾಹನ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಇದರಿಂದ ತೀವ್ರಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆಕ್ರೋಶಗೊಂಡ ಮಡೆರಹಳ್ಳಿ, ಸುತ್ತಮುತ್ತಲಿನ ಗ್ರಾಮಸ್ಥರು ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಧರಣಿ ನಡೆಸಿದರು. ಇದರಿಂದ ಎರಡು ಕಿ.ಮಿನಷ್ಟು ವಾಹನ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ಪ್ರಯಾಣಿಕರು ಪರದಾಡಬೇಕಾಯಿತು. ಧರಣಿನಿರತರನ್ನು ಮನವೊಲಿಸಲು ಮುಂದಾದ ಪೊಲೀಸರ ಪ್ರಯತ್ನ ವಿಫಲವಾಯಿತು.

ಗೇಟ್‌ನಲ್ಲಿ ರಸ್ತೆ ದಾಟಲು ಸಮಸ್ಯೆ ಎದುರಾಗಿದೆ. ಈಗಾಗಲೇ ಅನೇಕ ಅಪಘಾತಗಳು ಸಂಭವಿಸಿ ಸಾಕಷ್ಟು ಮಂದಿ ಅಪಘಾತಕ್ಕೆ ಈಡಾಗಿದ್ದಾರೆ. ಇಲ್ಲಿ ಅಂಡರ್ ಪಾಸ್ ನಿರ್ಮಾಣ ಮಾಡುವಂತೆ ಒತ್ತಾಯಿಸಿದ್ದರೂ ಜಿಲ್ಲಾಡಳಿತ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಧರಣಿನಿರತರು ದೂರಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತಿರುತ್ತವೆ. ನಾಗಲಾಪುರ, ಮಡೆರಹಳ್ಳಿ, ಕೆಂದಟ್ಟಿ, ಕೊಂಡರಾಜನಹಳ್ಳಿ ಬಳಿ ರಸ್ತೆ ದಾಟಲು ಅಂಡರ್ ಪಾಸ್ ವ್ಯವಸ್ಥೆಯಿಲ್ಲ. ವಾಹನಗಳು ಅತಿ ವೇಗದಿಂದ ಸಂಚರಿಸುದರಿಂದ ರಸ್ತೆ ದಾಟಲು ಸಮಸ್ಯೆಯಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿ, ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸಬೇಕು ಎಂದು ಪಟ್ಟು ಹಿಡಿದರು.

‘ಹೆದ್ದಾರಿಯಲ್ಲಿನ ಗೇಟ್‌ಗಳಲ್ಲಿ ಎಚ್ಚರಿಕೆಯ ಸೂಚನಾ ಫಲಕಗಳನ್ನು ಅಳವಡಿಸಿಲ್ಲ. ಹೆದ್ದಾರಿ ಪ್ರಾಧಿಕಾರದವರು ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡಿ ಸಾರ್ವಜನಿಕರ ಜೀವನದ ಜತೆಗೆ ಚೆಲ್ಲಾಟವಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ಸ್ಥಳಕ್ಕೆ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಭೇಟಿ ನೀಡಿ ಧರಣಿ ನಿರತರೊಂದಿಗೆ ಚರ್ಚೆ ನಡೆಸಿ ಅಂಡರ್ ಪಾಸ್ ನಿರ್ಮಾಣ ಮಾಡುವ ಭರವಸೆ ನೀಡದ ಮೇಲೆ ಧರಣಿ ಕೈಬಿಟ್ಟರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !