ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ಡಿಕ್ಕಿ: ಚಿರತೆ ಸಾವು

Last Updated 20 ಸೆಪ್ಟೆಂಬರ್ 2020, 14:54 IST
ಅಕ್ಷರ ಗಾತ್ರ

ಕೋಲಾರ: ನಗರದ ಹೊರವಲಯದ ಮಡೇರಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶನಿವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಹೆಣ್ಣು ಚಿರತೆ ಮೃತಪಟ್ಟಿದೆ.

ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಡಿಕ್ಕಿ ಹೊಡೆದಿದ್ದು, ತೀವ್ರವಾಗಿ ಗಾಯಗೊಂಡ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ. ಘಟನೆ ನಂತರ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದು, ವಾಹನದ ಗುರುತು ಪತ್ತೆಯಾಗಿಲ್ಲ.

‘ಚಿರತೆಯ ಬಲ ಮುಂಗಾಲು ಹಾಗೂ ಮೂಗಿನ ಭಾಗಕ್ಕೆ ಪೆಟ್ಟಾಗಿದೆ. ಮೃತ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಅಪಘಾತದಿಂದ ಮೃತಪಟ್ಟಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಇ.ಶಿವಶಂಕರ್‌ ‘ಪ್ರಜಾವಾಣಿ’ಗೆ ತಿಳಿಸಿದರು.

‘ಮೃತ ಚಿರತೆಯ ವಯಸ್ಸು ಸುಮಾರು 2 ವರ್ಷ. ಚಿರತೆಯ ಹಲ್ಲು, ಉಗುರು ಹಾಗೂ ಮೀಸೆ ಕಳೇಬರದಲ್ಲೇ ಇವೆ. ಪ್ರಕರಣ ಸಂಬಂಧ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್‌) ನೇತೃತ್ವದ ತಂಡವು ಹೆಚ್ಚಿನ ತನಿಖೆ ನಡೆಸುತ್ತಿದೆ’ ಎಂದು ಹೇಳಿದ್ದಾರೆ.

6 ದಿನಗಳ ಹಿಂದೆಯಷ್ಟೇ ಮಡೇರಹಳ್ಳಿ ಸಿ ಬ್ಲಾಕ್‌ ಅರಣ್ಯ ಪ್ರದೇಶದ ಬಳಿಯ ವೆಂಕಟಾಪುರ ಗ್ರಾಮದಲ್ಲಿ ಒಂದೂವರೆ ವರ್ಷದ ಹೆಣ್ಣು ಚಿರತೆಯೊಂದು ಬೇಟೆಗಾರರ ಉರುಳಿಗೆ ಸಿಲುಕಿ ಗಾಯಗೊಂಡಿತ್ತು. ನಂತರ ಅರಣ್ಯ ಇಲಾಖೆ ಸಿಬ್ಬಂದಿಯು ಚಿರತೆಯನ್ನು ರಕ್ಷಿಸಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಚಿರತೆ ಮೃತಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT