ವೇಮಗಲ್: ಪಟ್ಟಣದ ಸ್ತ್ರೀ ಶಕ್ತಿ ಭವನದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ವಿಶೇಷ ಅರಿವು ಕಾರ್ಯಕ್ರಮ ಗುರುವಾರ ನಡೆಯಿತು.

ಈ ವೇಳೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ನಟೇಶ್ ಮಾತನಾಡಿ, ವರದಕ್ಷಿಣೆ ಕೇವಲ ಸಾಮಾಜಿಕ ಪಿಡುಗಲ್ಲ. ಅದು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಬೇಸರ ವ್ಯಕ್ತಪಡಿಸಿದರು.

ಮದುವೆ ಎಂಬ ಪವಿತ್ರ ಬಂಧವು ಹಣದ ವ್ಯವಹಾರವಾಗಿ ಬದಲಾಗುತ್ತಿರುವುದು ವಿಷಾದನೀಯ. ವರದಕ್ಷಿಣೆ ಪಡೆಯುವುದು ಮತ್ತು ಕೊಡುವುದು ಎರಡೂ ಕಾನೂನುಬಾಹಿರ. ಇದರಿಂದ ಅನೇಕ ಕುಟುಂಬಗಳು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತಿವೆ. ಹಾಗಾಗಿ ಗ್ರಾಮೀಣ ಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಶಿಕ್ಷಕರು ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿದರು.

ವೇಮಗಲ್ - ಕುರುಗಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಎಂ.ವೆಂಕಟೇಶ್ ಮಾತನಾಡಿ, ನಾಗರಿಕ ಸಮಾಜದಲ್ಲಿ ವರದಕ್ಷಿಣೆ ಶಾಪವಾಗಿ ಪರಿಣಮಿಸಿದೆ. ವರದಕ್ಷಿಣೆ ಕಿರುಕುಳದಂತಹ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ತಿಳಿಸಿದರು.

ಸಿ.ಎಸ್.ವೆಂಕಟೇಶ್, ಅನುಷಾ ಮುನಿರಾಜು, ಸ್ಥಾಯಿ ಸಮಿತಿ ಅಧ್ಯಕ್ಷ ನಾಗೇಶ್ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-18-979903348

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.