ವೇಮಗಲ್: ಮದ್ದೇರಿ ಮಲ್ಲಂಡಹಳ್ಳಿ ರಸ್ತೆಯಲ್ಲಿ ಮಾರ್ಚ್ 18ರಂದು ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಚೌಡಸಂದ್ರದ ಬಳಿ ವೇಮಗಲ್ ಪೊಲೀಸರು ಬಂಧಿಸಿದ್ದಾರೆ.

ಶಿಡ್ಲಘಟ್ಟ ತಾಲ್ಲೂಕಿನ ಚೌಡಸಂದ್ರ ಗ್ರಾಮದ ಗಜೇಂದ್ರ (32) ಹಾಗೂ ಮೋಹನ್ ಸಿ.ವಿ (23) ಬಂಧಿತ ಆರೋಪಿಗಳು. ಆರೋಪಿಗಳಿಂದ 50 ಗ್ರಾಂ ತೂಕದ ಮಾಂಗಲ್ಯ ಸರ, 2.70 ಗ್ರಾಂ ತೂಕದ ತಾಳಿ, ಎರಡು ಗುಂಡು ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾರ್ಚ್ 18 ರಂದು ಮದ್ದೇರಿ ಗ್ರಾಮದ ಸಾವಿತ್ರಮ್ಮ ಸಂಜೆ ಸಂತೆಯಿಂದ ಮದ್ದೇರಿ ಮಲ್ಲಂಡಹಳ್ಳಿ ಗ್ರಾಮಕ್ಕೆ ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದ ಅಪರಿಚಿತರು ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದರು. ಈ ಬಗ್ಗೆ ವೇಮಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರವಿಶಂಕರ್, ಸಿ.ಜಗದೀಶ್, ಡಿಎಸ್ಪಿ ಕೃಷ್ಣಪ್ಪ ಮಾರ್ಗದರ್ಶನದಲ್ಲಿ ವೇಮಗಲ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಂಜು ಬಿ.ಪಿ. ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.

ಕಾರ್ಯಾಚರಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಸುನೀತಾ ದೇವಿ, ಎಎಸ್ಐ ನಾರಾಯಣಸ್ವಾಮಿ, ಮಹೇಶ್, ಸುರೇಶ್, ರಾಮಚಂದ್ರ, ಹನುಮಂತ, ರವಿ, ಚಾಲಕ ನಾಗೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-18-163792478

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.