ಶ್ರೀನಿವಾಸಪುರ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ಅಧ್ಯಕ್ಷರಾಗಿ ವೆಂಕಟರೆಡ್ಡಿ, ಉಪಾಧ್ಯಕ್ಷರಾಗಿ ಶಿವಪುರ ಬಿ.ಗುರ್ರಪ್ಪ ಅವಿರೋಧ ಆಯ್ಕೆಯಾಗಿದ್ದಾರೆ.

ಟಿಎಪಿಸಿಎಂಎಸ್ ಆಡಳಿತ ಮಂಡಳಿಯಲ್ಲಿ ಒಟ್ಟು 11 ಸದಸ್ಯರು ಇದ್ದಾರೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಮುಂದಿನ ಐದು ವರ್ಷಗಳ ಅವಧಿಗೆ ಈ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ ಮುಸ್ತಾಕ್ ಅಹ್ಮದ್ ಮಾಹಿತಿ ನೀಡಿದರು.

ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಶೋಕ್ ಮಾತನಾಡಿ, ‘ಈಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿತ ನಿರ್ದೇಶಕರು ಆಯ್ಕೆಯಾಗಿದ್ದರು. ಈಗ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಈ ಎಲ್ಲವೂ ಮಾಜಿ ಶಾಸಕ ಕೆ.ಆರ್.ರಮೇಶ್ಕುಮಾರ್ ಅವರ ಮಾರ್ಗದರ್ಶನದಂತೆ ನಡೆದಿದೆ’ ಎಂದರು.

ನೂತನ ಅಧ್ಯಕ್ಷ ವಿ.ವೆಂಕಟರೆಡ್ಡಿ ಮಾತನಾಡಿದರು. ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಕೋಡಿಪಲ್ಲಿ ಸುಬ್ಬಿರೆಡ್ಡಿ, ಮುಖಂಡರಾದ ಸೀತರಾಮರೆಡ್ಡಿ, ಕೃಷ್ಣಾರೆಡ್ಡಿ , ಬಿ.ಎಂ.ಪ್ರಕಾಶ್, ಹರೀಶ್, ಮಾಜಿ ರೈತ ಸಂಘದ ಅಧ್ಯಕ್ಷ ನಂಬಿಹಳ್ಳಿ ಶ್ರೀರಾಮರೆಡ್ಡಿ, ಎಸ್.ವಿ.ಸುಧಾಕರ್, ವೆಂಕಟರೆಡ್ಡಿ, ಆಲವಾಟ ರವಿ ಹಾಗೂ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.