ಕೋಲಾರ: ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳಿಗೆ ಬೇಡಿಕೆ ಹೆಚ್ಚುತ್ತಲೇ ಇದ್ದು ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ 5,70,982 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.
ಕಂದಾಯ ಇಲಾಖೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದ ಸೇರಿ ಒಟ್ಟು ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿತ್ತು.
ಅರ್ಜಿ ಸಲ್ಲಿಕೆ ಅವಧಿ ಮುಗಿದಿದ್ದು ಮಾಸಿಕ ₹21,400 – ₹42,000 ವೇತನ ಇರುವ ಈ ಹುದ್ದೆಗೆ ದ್ವಿತೀಯ ಪಿಯು ಅಥವಾ ತತ್ಸಮಾನ ವಿದ್ಯಾಭ್ಯಾಸ ನಿಗದಿಪಡಿಸಲಾಗಿದೆ.
ಎರಡು ಹಂತಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಮೊದಲ ಹಂತದ ಪರೀಕ್ಷೆ ಸೆಪ್ಟೆಂಬರ್ 29 ಹಾಗೂ ಎರಡನೇ ಹಂತದ ಪರೀಕ್ಷೆ ಅಕ್ಟೋಬರ್ 27ರಂದು ಎಲ್ಲಾ ಜಿಲ್ಲೆಗಳಲ್ಲಿ ನಡೆಯಲಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿರುವುದರಿಂದ ಜಿಲ್ಲೆಯ ಎಲ್ಲ ಪಿಯು ಕಾಲೇಜುಗಳ ಜೊತೆಗೆ ಪದವಿ ಕಾಲೇಜು, ವಿಶ್ವವಿದ್ಯಾಲಯ ಕಾಲೇಜು, ಡಿಪ್ಲೊಮಾ, ನರ್ಸಿಂಗ್, ಫಾರ್ಮಸಿ ಕಾಲೇಜು ಹಾಗೂ ಪ್ರೌಢಶಾಲೆಗಳಲ್ಲೂ ಪರೀಕ್ಷೆ ನಡೆಸಲು ಪ್ರಾಧಿಕಾರ ಸಲಹೆ ನೀಡಿದೆ.
ಅರ್ಜಿ ಆಹ್ವಾನಿಸಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೆ.29, ಅ.27ರಂದು ಎರಡು ಹಂತಗಳಲ್ಲಿ ಜಿಲ್ಲೆಗಳಲ್ಲಿ ಪರೀಕ್ಷೆ ಕೋಲಾರ ಜಿಲ್ಲೆಯಲ್ಲೇ 13,361 ಅರ್ಜಿ ಸಲ್ಲಿಕೆ
ಗ್ರಾಮ ಆಡಳಿತಾಧಿಕಾರಿ ಹುದ್ದೆ ಸಂಬಂಧ ನಾವು ಜಾಹೀರಾತು ನೀಡಿದ್ದೆವು. ಸಾಮಾಜಿಕ ಜಾಲತಾಣಗಳಲ್ಲೂ ಪ್ರಚಾರ ಮಾಡಿದ್ದೆವು. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಬಂದಿವೆಅಕ್ರಂ ಪಾಷಾ ಜಿಲ್ಲಾಧಿಕಾರಿ ಕೋಲಾರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.