ಮಂಗಳವಾರ, ಮೇ 18, 2021
28 °C

17ಕ್ಕೆ ಶೆಟ್ಟಿಕುಂಟೆಯಲ್ಲಿ ಗ್ರಾಮ ವಾಸ್ತವ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ತಾಲ್ಲೂಕಿನ ಸುಗಟೂರು ಹೋಬಳಿ ವ್ಯಾಪ್ತಿಯ ಶೆಟ್ಟಿಕುಂಟೆ ಗ್ರಾಮದಲ್ಲಿ ಏ.17ರಂದು ಗ್ರಾಮ ವಾಸ್ತವ್ಯ ಹಮ್ಮಿಕೊಂಡಿದ್ದು, ಗ್ರಾಮಸ್ಥರು ಯಾವುದೇ ಕುಂದು ಕೊರತೆ ಸಂಬಂಧ ಅರ್ಜಿ ಸಲ್ಲಿಸಬಹುದು’ ಎಂದು ತಹಶೀಲ್ದಾರ್‌ ಶೋಭಿತಾ ತಿಳಿಸಿದರು.

ಗ್ರಾಮ ವಾಸ್ತವ್ಯ ಸಂಬಂಧ ಇಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ಶೆಟ್ಟಿಕುಂಟೆ ಗ್ರಾಮಸ್ಥರು ಕೆರೆ ಹಾಗೂ ಸ್ಮಶಾನವನ್ನು ಸರ್ವೆ ಮಾಡಿಸುವಂತೆ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಸ್ಮಶಾನವನ್ನು ಸರ್ವೆ ಮಾಡಿದ ನಂತರ ಪಿಡಿಒಗಳಿಗೆ ಹಸ್ತಾಂತರ ಮಾಡಲಾಗುವುದು’ ಎಂದರು.

‘ಶೆಟ್ಟಿಕುಂಟೆ ಗ್ರಾಮದಲ್ಲಿ 45 ಮನೆಗಳಿದ್ದು, ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ಜಾನುವಾರುಗಳಿಗೆ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗುವುದು. ಗ್ರಾಮ ವಾಸ್ತವ್ಯದಲ್ಲಿ ಫಲಾನುಭವಿಗಳಿಗೆ ಆರೋಗ್ಯ ಕಾರ್ಡ್‌ ವಿತರಿಸಲಾಗುವುದು. ಗ್ರಾಮದಲ್ಲಿ ಶಾಲೆ ಶಿಥಿಲಗೊಂಡಿದ್ದು, ಶೀಘ್ರವೇ ದುರಸ್ತಿ ಮಾಡಬೇಕು’ ಎಂದು ಸೂಚಿಸಿದರು.

‘ಗ್ರಾಮದಲ್ಲಿ ಹುಣಸೆ ಮರಗಳಿಗೆ ಮಣ್ಣು ಹಾಕಿಸಬೇಕು. ಚರಂಡಿಗಳನ್ನು ದುರಸ್ತಿ ಮಾಡಬೇಕು. ಗ್ರಾಮಸ್ಥರು ಗ್ರಾಮದಲ್ಲೇ ಕೋವಿಡ್‌ ಲಸಿಕೆ ಪಡೆಯಬಹುದು. ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗಾಗಿ ಗ್ರಾಮದಲ್ಲಿ ಆರೋಗ್ಯ ಶಿಬಿರ ನಡೆಸಲಾಗುತ್ತದೆ ಮತ್ತು ಗರ್ಭಿಣಿಯರಿಗೆ ಸೀಮಂತ ಮಾಡಲಾಗುವುದು. ಹೆಣ್ಣು ಮಕ್ಕಳಿಗೆ ಭಾಗ್ಯಲಕ್ಷ್ಮಿ ಬಾಂಡ್‌ ವಿತರಿಸಲಾಗುತ್ತದೆ. ವೃದ್ಥಾಪ್ಯ ವೇತನದ ಫಲಾನುಭವಿಗಳಿಗೆ ಆದೇಶದ ಪ್ರತಿ ನೀಡಲಾಗುವುದು’ ಎಂದು ವಿವರಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಬಾಬು, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಮ್ಯಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.