ಭಾನುವಾರ, ಜೂಲೈ 12, 2020
28 °C

ಕ್ವಾರಂಟೈನ್‌ ಉಲ್ಲಂಘನೆ: ದೂರು ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಜಿಎಫ್‌: ಹೋಂ ಕ್ವಾರಂಟೈನ್‌ಗೆ ಒಳಗಾದ ಇಬ್ಬರು ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಸಾರ್ವಜನಿಕ ರಸ್ತೆಗಳಲ್ಲಿ ಓಡಾಡುತ್ತಿದ್ದಾರೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಇಬ್ಬರು ನಿವಾಸಿಗಳ ವಿರುದ್ಧ ಪೊಲೀಸರಿಗೆ ಸೋಮವಾರ ದೂರು ನೀಡಿದ್ದಾರೆ.

ಆಂಡರಸನ್‌ಪೇಟೆಯ ಕಿರಣ್‌ ಮತ್ತು ಆಯಿಷ ಎಂಬುವರು ಕೋವಿಡ್‌–19 ಸಂಪರ್ಕ ಇರುವ ವ್ಯಕ್ತಿಗಳೊಂದಿಗೆ ಸಂಪರ್ಕ ಹೊಂದಿದ್ದರು. ಅವರನ್ನು ಜೂನ್ 24 ರಿಂದ ಕ್ವಾರಂಟೈನ್‌ಗೆ ಒಳಪಡಿಸಿ, ಮನೆ ಬಿಟ್ಟು ಬೇರೆ ಸ್ಥಳಗಳಲ್ಲಿ ಓಡಾಡಬಾರದು ಎಂದು ಸೂಚಿಸಲಾಗಿತ್ತು.

ಆದರೂ ಇವರು ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಎಲ್ಲೆಡೆ ತಿರುಗಾಡುತ್ತಿದ್ದರು. ಈ ಸಂಬಂಧವಾಗಿ ನೋಟಿಸ್ ಸಹ ನೀಡಲಾಗಿತ್ತು. ನೋಟಿಸನ್ನು ಲೆಕ್ಕಿಸದೆ ಸಾರ್ವಜನಿಕ ಪ್ರದೇಶದಲ್ಲಿ ಓಡಾಡಿ, ಕರ್ನಾಟಕ ಸಾಂಕ್ರಾಮಿಕ ರೋಗಗಳ ಕೋವಿಡ್‌ 19 ನಿಯಂತ್ರಣ ನಿಯಮಾವಳಿ 2020ರ ಪ್ರಕಾರ ಕಾನೂನನ್ನು ಉಲ್ಲಂಘನೆ ಮಾಡಿದ್ದಾರೆ ಎಂಬ ಕಾರಣಕ್ಕಾಗಿ ತಾಲ್ಲೂಕು ವೈದ್ಯಾಧಿಕಾರಿ ಡಾ.ವಿಶ್ವನಾಥರೆಡ್ಡಿ ಆಂಡರಸನ್‌ಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು