ಭಾನುವಾರ, ಸೆಪ್ಟೆಂಬರ್ 19, 2021
26 °C

ಮುನಿಯಪ್ಪಗೆ ಮತದಾರರು ವಿಶ್ರಾಂತಿ ನೀಡಿ: ಪಕ್ಷೇತರ ಅಭ್ಯರ್ಥಿ ವಿ.ಎಂ.ರಮೇಶ್‌ಬಾಬು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಕ್ಷೇತ್ರದ ಜನ ನೆಮ್ಮದಿಯಿಂದ ಜೀವನ ನಡೆಸಲು ಮುನಿಯಪ್ಪನನ್ನು ಚುನಾವಣೆಯಲ್ಲಿ ಸೋಲಿಸುವ ಮೂಲಕ ವಿಶ್ರಾಂತಿ ನೀಡಬೇಕು’ ಎಂದು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ವಿ.ಎಂ.ರಮೇಶ್‌ಬಾಬು ತಿಳಿಸಿದರು.

ತಾಲ್ಲೂಕಿನ ಉಪ್ಪುಕುಂಟೆ, ಸುಗಟೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಮಾತನಾಡಿ, ‘7 ಭಾರಿಯಿಂದ ಸಂಸದರಾಗಿ ಕ್ಷೇತ್ರವನ್ನು ಪ್ರತಿನಿಧಿಸಿರುವ ಕೆ.ಎಚ್.ಮುನಿಯಪ್ಪ ವೈಫಲ್ಯಗಳ ಬಗ್ಗೆ ಜನರಿಗೆ ಅರಿವಿದ್ದು, ಈ ಚುನಾವಣೆಯಲ್ಲಿ ಅವರಿಗೆ ಜನ ತಕ್ಕ ಪಾಠ ಕಲಿಸಬೇಕು’ ಎಂದು ಸಲಹೆ ನೀಡಿದರು.

‘ಕ್ಷೇತ್ರದಲ್ಲಿ ಆದರ್ಶ ಗ್ರಾಮ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ಸಂಸದ ಕೆ.ಎಚ್.ಮುನಿಯಪ್ಪ ಆದರ್ಶವನ್ನು ನಿರ್ಮಾಣ ಮಾಡಲು ತೆಗೆದುಕೊಂಡಿರುವ ಗ್ರಾಮದ ಪತಿಸ್ಥಿತಿ ನೋಡಿದರೆ ಬೇಸರವಾಗುತ್ತದೆ. ವಿವಿಧ ರೀತಿಯ ಟೆಂಡರ್‌ಗಳನ್ನು ತಮ್ಮ ಕುಟುಂಬಸ್ಥರಿಗೆ ಕೊಟ್ಟಿರುವುದರಿಂದ ಕಳಪೆ ಕಾಮಗಾರಿ ಮಾಡಿದ್ದಾರೆ. ಇದರಿಂದ ಗ್ರಾಮದ ಅಭಿವೃದ್ಧಿ ಹಿಂದುಳಿದಿದೆ’ ಎಂದು ವಿಷಾದವ್ಯಕ್ತಪಡಿಸಿದರು.

‘ಮೊದಲ ಭಾರಿಗೆ ಚುನಾವಣೆಗೆ ಸ್ಪರ್ಧಿಸುವಾಗ ಕೇವಲ 4.5 ಎಕರೆ ಜಮೀನು ಇರುವ ಬಗ್ಗೆ ದಾಖಲೆ ಸಲ್ಲಿಸಿದ್ದಾರೆ. ಆದರೆ ಈಗ ಮುನಿಯಪ್ಪ ನೂರಾರು ಎಕರೆ ಜಮೀನು ಮಾಡಿದ್ದಾರೆ. ಇದನ್ನೆಲ್ಲಾ ನಿಕೊಂಡು ಜನ ಸುಮ್ಮನೆ ಕುಳಿತಿಲ್ಲ. ಕ್ಷೇತ್ರದಲ್ಲಿ ಮುನಿಯಪ್ಪ ವಿರೋಧಿ ಹಲೆ ಎದಿದ್ದು, ಚುನಾವಣೆಯಲ್ಲಿ ಸೋಲಿಸಲು ಶ್ರಮಿಸುತ್ತಿದ್ದಾರೆ’ ಎಂದರು.

‘ಮುನಿಯಪ್ಪ ಕೇವಲ ಕೋಲಾರ ನಗರ ಮತ್ತು ಕೆಜಿಎಫ್‌ ಕ್ಷೇತ್ರಕ್ಕೆ ಮಾತ್ರ ಸಂಸದರಾಗಿದ್ದಾರೆ. ಇನ್ನುಳಿದ ಕ್ಷೇತ್ರಗಳನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಸಂಸದರ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವಲ್ಲಿ ವಿಫಲರಾಗಿದ್ದಾರೆ’ ಎಂದು ಆರೋಪಿಸಿದರು.

‘ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲೂ ವಿವಿಧ ಸಮಯದಾಯದ ಮುಖಂಡರು ಸಭೆ ನಡೆಸಿ ಮುನಿಯಪ್ಪನನ್ನು ಸೋಲಿಸಲು ತೀರ್ಮಾನಿಸಿದ್ದಾರೆ. ಈ ಬೆಳವಣಿಗೆಗಳು ನನ್ನ ಗೆಲುವಿಗೆ ಸಹಕಾರಿಯಾಗುತ್ತದೆ. ಜತೆಗೆ ಎಲ್ಲಾ ಕ್ಷೇತ್ರ ಶಾಸಕರನ್ನು ಸಂಪರ್ಕಿಸಲಾಗಿದ್ದು, ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ’ ಎಂದು ಹೇಳಿದರು.

‘ಜಿಲ್ಲೆಯ ಜನರನ್ನು ಬರದಿಂದ ಪಾರು ಮಾಡಲು ಹಿಂದಿನ ಸರ್ಕಾರ ಕೆಸಿ ವ್ಯಾಲಿ ಯೋಜನೆಯನ್ನು ಅನುಷ್ಠಾನಗೊಳಿಸಿ ಕೆರೆಗಳಿಗೆ ನೀರು ಹರಿಸಿದರು. ಆದರೆ ಕ್ಷೇತ್ರದ ಪ್ರಭಾವಿ ಮುಖಂಡ ಬೇರೆ ಜಿಲ್ಲೆಯ ರೈತರನ್ನು ಮುಂದಿಟ್ಟುಕೊಂಡು ರಾಜ್ಯದ ಹೈಕೋರ್ಟ್‌ನಲ್ಲಿ ಅರ್ಜಿಸಿ ಹಾಕಿಸಿ ತಡೆಯಾಜ್ಞೆ ತಂದರು. ಅದರೆ ಅವರ ಪ್ರಯತ್ನ ವಿಫಲವಾಯಿತು’ ಎಂದು ತಿಳಿಸಿದರು.

‘ಹೈಕೋರ್ಟ್‌ನಲ್ಲಿ ಜನರ ಪರ ತೀರ್ಪು ಬರುವಷ್ಟರಲ್ಲಿ, ಸುಪ್ರೀಂ ಕೋರ್ಟ್‌ಗೂ ಅರ್ಜಿ ಸಲ್ಲಿಸಿದರು. ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್‌ಕುಮಾರ್ ಸುಪ್ರೀಂ ಕೋರ್ಟ್‌ಗೆ ಜಿಲ್ಲೆಯ ಜನರ ಪಡುತ್ತಿರುವ ಸಂಕಷ್ಟದ ಬಗ್ಗೆ ಮನವರಿಕೆ ಮಾಡಿಕೊಟ್ಟರು, ಇದರಿಂದ ಜನರ ಪರವಾಗಿಯೇ ತೀರ್ಪು ಕೊಟ್ಟಿದೆ. ಇದರಿಂದ ತಡೆಯಾಜ್ಞೆ ಮಾಡಿದ್ದ ವ್ಯಕ್ತಿಗೆ ಹಿನ್ನಡೆಯಾಗಿದೆ. ಎಂದಿಗೂ ಜನರಿಗೆ ತೊಂದರೆ ಮಾಡಲು ನೋಡಿದರೆ ಪ್ರತಿ ವಿಚಾರದಲ್ಲೂ ಅವಮಾನ ಭರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಮುಖಂಡರಾದ ವೆಂಕಟೇಶ್, ಪ್ರದೀಪ್, ಶ್ರೀಹರಿ, ರಮೇಶ್‌ಕುಮಾರ್, ಕಿಟ್ಟಪ್ಪ, ಶಕ್ತಿ ಪ್ರಸಾದ್, ಗಣೇಶ್ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು