ಶ್ರೀನಿವಾಸಪುರ: ಪಟ್ಟಣ ಹೊರವಲಯದ ಪುಂಗನೂರು ರಸ್ತೆಯಲ್ಲಿ ಶುಕ್ರವಾರ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಹಿಡಿದು ಬೈಕ್ ವಶಪಡಿಸಿಕೊಂಡಿದ್ದಾರೆ.
ರಸ್ತೆಯಲ್ಲಿ ಅಪಾಯಕಾರಿಯಾಗಿ ಬೈಕ್ ವ್ಹೀಲಿಂಗ್ ನಡೆಸುತ್ತಿದ್ದ ಬಗ್ಗೆ ಪೊಲೀಸರಿಗೆ ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಜೆ.ಇ. ನಾರಾಯಣಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ವ್ಹೀಲಿಂಗ್ ನಡೆಸುತ್ತಿದ್ದ ಪಟ್ಟಣದ ಆಜಾದ್ ರಸ್ತೆ ನಿವಾಸಿ ಜಾಕೀರ್ ಖಾನ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಬಳಿಕ ಠಾಣಾ ಜಾಮೀನು ನೀಡಿ ಬಿಡುಗಡೆ ಮಾಡಿದ್ದಾರೆ. ವ್ಹೀಲಿಂಗ್ ಮಾಡಲು ಬಳಸಿದ್ದ ಬೈಕ್ ಅನ್ನು ನ್ಯಾಯಾಲಯದ ವಶಕ್ಕೆ ನೀಡಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.