ಮಾಲೂರು ಬಿಟ್ಟು ಬೆಂಗಳೂರಿನಿಂದ ಸ್ಪರ್ಧೆ: ಕೃಷ್ಣಯ್ಯ ಶೆಟ್ಟಿ ಇಂಗಿತ

ಮಾಲೂರು (ಕೋಲಾರ): ’ಮಾಲೂರಿನ ಜನರು ಎರಡು ಬಾರಿ ಚುನಾವಣೆಯಲ್ಲಿ ನನ್ನನ್ನು ಸೋಲಿಸಿದ್ದರಿಂದ ಈ ಬಾರಿ ಬೆಂಗಳೂರಿನ ಗಾಂಧಿನಗರ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುವ ಇಂಗಿತ ಇದೆ’ ಎಂದು ಮಾಜಿ ಸಚಿವ ಎಸ್.ಎನ್ ಕೃಷ್ಣಯ್ಯ ಶೆಟ್ಟಿ ತಿಳಿಸಿದ್ದಾರೆ.
ಪಟ್ಟಣದಲ್ಲಿ ಮಂಗಳವಾರ ಯುಗಾದಿ ಪ್ರಯುಕ್ತ ಉಡುಗೊರೆ ಕಿಟ್ ವಿತರಿಸಿ ಮಾತನಾಡಿದ ಅವರು, ‘ಗಾಂಧಿನಗರ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ಗೆ ಪ್ರಯತ್ನಿಸುತ್ತೇನೆ. ಆದರೆ, ಮಾಲೂರು ಕ್ಷೇತ್ರದಿಂದ ಮಾತ್ರ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಬೇರೆಯವರಿಗೆ ಟಿಕೆಟ್ ನೀಡಿದರೂ ಅವರ ಗೆಲುವಿಗೆ ಶ್ರಮಿಸುತ್ತೇನೆ’ ಎಂದರು.
ಈ ಹಿಂದೆ ಬಿಜೆಪಿಯಲ್ಲಿ ಸಚಿವರಾಗಿದ್ದ ಕೃಷ್ಣಯ್ಯ ಶೆಟ್ಟಿ ಅವರು ಚುನಾವಣೆಯಲ್ಲಿ ಸೋತ ನಂತರ ಕಾಂಗ್ರೆಸ್ ಸೇರಿದ್ದರು. ಈಗ ಮತ್ತೆ ಬಿಜೆಪಿಗೆ ಹಿಂದಿರುಗಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.